ಬೆಂಗಳೂರು: ಕಾಡುಗೋಡಿಯಲ್ಲಿ ಒತ್ತುವರಿಯಾಗಿದ್ದ 120 ಎಕರೆ ಅರಣ್ಯ ಭೂಮಿಯನ್ನು ಅರಣ್ಯ ಅಧಿಕಾರಿಗಳು ಪೊಲೀಸರ ನೆರವಿನೊಂದಿಗೆ ಸೋಮವಾರ ಮರುವಶಪಡಿಸಿಕೊಂಡಿದ್ದಾರೆ.

ಪೂರ್ವ ತಾಲ್ಲೂಕು ಬಿದರಹಳ್ಳಿ ಹೋಬಳಿ, ಕಾಡುಗೋಡಿ ಪ್ಲಾಂಟೇಷನ್ನ ಸರ್ವೆ ನಂ.1ರಲ್ಲಿ 120 ಎಕರೆ ಅರಣ್ಯ ಭೂಮಿ ಒತ್ತುವರಿ ತೆರವುಗೊಳಿಸಲಾಗಿದೆ. ಪೊಲೀಸ್ ಬಂದೋಬಸ್ತ್ನಲ್ಲಿ ಸೋಮವಾರ ಬೆಳಿಗ್ಗೆಯೇ ಜೆಸಿಬಿಯೊಂದಿಗೆ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿತು.

ಒತ್ತುವರಿ ತೆರವು ಮಾಡಿ, ಗಡಿ ಗುರುತಿಸಿ ಸ್ಥಳೀಯ ಪ್ರಭೇದದ ಸಸಿಗಳನ್ನು ನೆಡಲಾಗುತ್ತಿದೆ. ವಶಪಡಿಸಿಕೊಳ್ಳಲಾದ ಅರಣ್ಯ ಭೂಮಿಯ ಮಾರುಕಟ್ಟೆ ಮೌಲ್ಯ ₹4 ಸಾವಿರ ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಕಾಡುಗೋಡಿ ಅರಣ್ಯ ಪ್ರದೇಶ ಕುರಿತಂತೆ ಇತ್ತೀಚೆಗೆ ನಡೆದ ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರು, ನಿಯಮಾನುಸಾರ ಅರಣ್ಯ ಭೂಮಿ ಒತ್ತುವರಿ ತೆರವು ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದರು.

‘ಅರಣ್ಯ ಸಚಿವನಾಗಿ ಅಧಿಕಾರ ವಹಿಸಿಕೊಂಡ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಒಟ್ಟು 248 ಎಕರೆ ಅರಣ್ಯ ಭೂಮಿ ಒತ್ತವರಿ ತೆರವುಗೊಳಿಸಲಾಗಿದೆ. ಇದರ ಮಾರುಕಟ್ಟೆ ಮೌಲ್ಯ ₹8 ಸಾವಿರ ಕೋಟಿಗೂ ಅಧಿಕ’ ಎಂದು ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.