ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿನಲ್ಲಿ ನಿಷೇಧಾಜ್ಞೆ: ಒತ್ತಾಯದ ಬಂದ್‌ಗೆ ಅವಕಾಶವಿಲ್ಲ- ಪೊಲೀಸ್ ಆಯುಕ್ತ

Published 25 ಸೆಪ್ಟೆಂಬರ್ 2023, 12:54 IST
Last Updated 25 ಸೆಪ್ಟೆಂಬರ್ 2023, 12:54 IST
ಅಕ್ಷರ ಗಾತ್ರ

ಬೆಂಗಳೂರು: ಸೆ. 26ರಂದು ಕಾವೇರಿ ಜಲ ಸಂರಕ್ಷಣಾ ಸಮಿತಿ ಬೆಂಗಳೂರು ಬಂದ್‌ಗೆ ಕರೆ ನೀಡಿದ್ದು, ಇದರ ಬೆನ್ನಲ್ಲೇ ನಗರದಲ್ಲಿ ನಿಷೇಧಾಜ್ಞೆ ಹೊರಡಿಸಲಾಗಿದೆ.

ನಗರದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪೊಲೀಸ್ ಕಮಿಷನರ್ ಬಿ. ದಯಾನಂದ್, ‘ಹೈಕೋರ್ಟ್ ಆದೇಶದನ್ವಯ ನಗರದಲ್ಲಿ ಪ್ರತಿಭಟನೆ ಹಾಗೂ ಬಂದ್‌ಗೆ ಅವಕಾಶವಿಲ್ಲ. ಹೀಗಾಗಿ, ಸೆ. 26ರಂದು ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ’ ಎಂದರು.

‘ಸೆ. 25ರಂದು ರಾತ್ರಿ 12 ಗಂಟೆಯಿಂದ ಸೆ. 26ರ ರಾತ್ರಿ 12 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ಅವಧಿಯಲ್ಲಿ ಜನರು ಗುಂಪು ಸೇರುವುದು ಕಾನೂನು ಬಾಹಿರ. ಒತ್ತಾಯದಿಂದ ಬಂದ್ ಮಾಡಲು ಪ್ರಯತ್ನಿಸಿದರೆ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಅವರು ಹೇಳಿದರು.

‘60 ಕೆಎಸ್‌ಆರ್‌ಪಿ ತುಕಡಿ, 40 ಸಿಎಆರ್ ತುಕಡಿ ಸೇರಿದಂತೆ 3 ಸಾವಿರಕ್ಕೂ ಹೆಚ್ಚು ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಗಡಿಭಾಗದಲ್ಲೂ ಭದ್ರತೆ ಬಿಗಿಗೊಳಿಸಲಾಗಿದೆ. ತಮಿಳುನಾಡು ಬಸ್‌ಗಳಿಗೂ ಭದ್ರತೆ ನೀಡಲು ಸಿದ್ಧರಿದ್ದೇವೆ’ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT