ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

1.5 ಲಕ್ಷ ನೋಟ್‌ಬುಕ್ ವಿತರಣೆ

Published 24 ಜೂನ್ 2023, 19:53 IST
Last Updated 24 ಜೂನ್ 2023, 19:53 IST
ಅಕ್ಷರ ಗಾತ್ರ

ಬೆಂಗಳೂರು: ‘ಮಕ್ಕಳಿಗೆ ಜ್ಞಾನಾರ್ಜನೆ ಮುಖ್ಯ. ಜ್ಞಾನ ಪಡೆಯಬೇಕಾದರೆ ಶಿಕ್ಷಣ ಮುಖ್ಯ’ ಎಂದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಹೇಳಿದರು.

ಜಯನಗರದ ಚಂದ್ರಗುಪ್ತ ಮೌರ್ಯ ಆಟದ ಮೈದಾನದಲ್ಲಿ ರಕ್ಷಾ ಫೌಂಡೇಷನ್ ವತಿಯಿಂದ 10 ಸಾವಿರ ಮಕ್ಕಳಿಗೆ 1.5 ಲಕ್ಷ ನೋಟ್‌ಬುಕ್‌ ವಿತರಣೆ ಮತ್ತು ಪ್ರತಿಭಾ ಪುರಸ್ಕಾರ ವಿತರಿಸಿ ಮಾತನಾಡಿದರು.

‘ದೇಶ, ಭಾಷೆ ಮತ್ತು ಸಂಸ್ಕೃತಿ, ಸಂಪ್ರದಾಯ ಮರೆಯಬಾರದು. ಮಕ್ಕಳು ರಾಷ್ಟ್ರಭಕ್ತಿ, ದೇಶಪ್ರೇಮ ಬೆಳೆಸಿ ಕೊಳ್ಳಬೇಕು’ ಎಂದರು.

ಸಂಸದ ತೇಜಸ್ವಿ ಸೂರ್ಯ ಮಾತ ನಾಡಿ, ‘ಶಿಕ್ಷಣಕ್ಕೆ ಪ್ರೋತ್ಸಾಹ, ಸಹಕಾರ ನೀಡುವುದು ಮುಖ್ಯ. ಈ ನಿಟ್ಟಿನಲ್ಲಿ ರಕ್ಷಾ ಫೌಂಡೇಷನ್ ದಿಟ್ಟ ಹೆಜ್ಜೆ ಇಟ್ಟಿದೆ’ ಎಂದರು.

ಜಯದೇವ ಸಂಸ್ಥೆಯ ನಿರ್ದೇಶಕ ಡಾ.ಮಂಜುನಾಥ್ ಮಾತನಾಡಿ, ‘ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಅವರನ್ನೇ ಆಸ್ತಿಯನ್ನಾಗಿ ಮಾಡಬೇಕು’ ಎಂದು ಹೇಳಿದರು.

ಶಾಸಕ ಬಿ.ವೈ.ವಿಜಯೇಂದ್ರ, ರಕ್ಷಾ ಫೌಂಡೇಷನ್ ಸಂಸ್ಥಾಪಕ, ಶಾಸಕ ಸಿ.ಕೆ.ರಾಮಮೂರ್ತಿ ಮಾತನಾಡಿದರು.

ಆರ್‌ಎಸ್‌ಎಸ್‌ನ ಸಹ ಕಾರ್ಯವಾಹ ತಿಪ್ಪೇಸ್ವಾಮಿ, ಸತೀಶ್ ರೆಡ್ಡಿ, ಮಾಜಿ ಮೇಯರ್‌ ಎಸ್.ಕೆ.ನಟರಾಜ್, ಪಾಲಿಕೆ ಮಾಜಿ ಸದಸ್ಯರಾದ ಸೋಮಶೇಖರ್, ನಾಗರತ್ನ ರಾಮಮೂರ್ತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT