ಶನಿವಾರ, ಆಗಸ್ಟ್ 13, 2022
27 °C

150 ವರ್ಷಗಳಷ್ಟು ಹಿಂದಿನ 'ಬೆಂಗಳೂರು ಗೇಟ್‌'ಗೆ ಹೊಸ ರೂಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇಲ್ಲಿಯ ಚಾಮರಾಜಪೇಟೆಯಲ್ಲಿರುವ 150 ವರ್ಷ ಹಳೆಯದ್ದಾದ ‘ಬೆಂಗಳೂರು ಗೇಟ್‌’ ಪಾರಂಪರಿಕ ಚೌಕಿಯನ್ನು ಸಂರಕ್ಷಣೆ ಮಾಡಿ ಹೊಸ ರೂಪ ನೀಡಲಾಗುತ್ತಿದ್ದು, ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ.

ಯಾರ ಗಮನಕ್ಕೂ ಬಾರದೆ ಪಾಳು ಬಿದ್ದಿದ್ದ ಬೆಂಗಳೂರು ಗೇಟ್ ಸಂರಕ್ಷಿಸಬೇಕೆಂಬ ಕೂಗು 2020ರಲ್ಲಿ ಕೇಳಿಬಂದಿದ್ದು, ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್ ಅವರು ಸಂರಕ್ಷಣೆ ಬಗ್ಗೆ ಟ್ವೀಟ್ ಸಹ ಮಾಡಿದ್ದರು.

ಗೇಟ್ ಸಂರಕ್ಷಣೆ ಮಾಡಬೇಕೆಂದು ರಾಜ್ಯ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸೇರಿದಂತೆ ನೂರಾರು ಸಾರ್ವಜನಿಕರೂ ಆಗ್ರಹಿಸಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಅಭಿಯಾನವೇ ನಡೆದಿತ್ತು. ಇದರ ಫಲವಾಗಿ, ರಾಜ್ಯ ಸರ್ಕಾರ ಹಾಗೂ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು  ಬೆಂಗಳೂರು ಗೇಟ್‌ ಅಭಿವೃದ್ಧಿ ಮಾಡಿಸುತ್ತಿದ್ದಾರೆ.

ಇದನ್ನೂ ಓದಿ: ‘ಬೆಂಗಳೂರು ಗೇಟ್’ ಸಂರಕ್ಷಣೆಗೆ ಹಕ್ಕೊತ್ತಾಯ

ಚಾಮರಾಜಪೇಟೆಯ ನಗರ ಸಶಸ್ತ್ರ ಮೀಸಲು ಪಡೆಯ ಕಾಂಪೌಂಡ್‌ನಲ್ಲಿರುವ ಗೇಟ್‌ಗೆ ಬಣ್ಣ ಬಳಿದು, ಸುತ್ತಲಿನ ಸ್ಥಳವನ್ನು ಸ್ವಚ್ಛಗೊಳಿಸಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಭಾಸ್ಕರ್‌ ರಾವ್, ಚೌಕಿ ಸಂರಕ್ಷಣೆ ಮಾಡಿ ಅಭಿವೃದ್ಧಿಪಡಿಸುತ್ತಿರುವ ಸರ್ಕಾರಕ್ಕೆ ಅಭಿನಂದನೆಗಳನ್ನು ತಿಳಿಸಿದ್ದಾರೆ. ಅಭಿವೃದ್ಧಿಗಾಗಿ ಕೆಲಸ ಮಾಡಿದ್ದ ಪೊಲೀಸ್ ಅಧಿಕಾರಿಗಳಾದ ವರ್ಟಿಕಾ ಕಟಿಯಾರ್, ದಿವ್ಯಾ ಹಾಗೂ ಸುಚೇತ್‌ ಅವರ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬ್ರಿಟಿಷರ ಕಾಲದಲ್ಲಿ ಮೈಸೂರಿನಿಂದ ನಗರಕ್ಕೆ ಬರುವವರ ಬಗ್ಗೆ ನಿಗಾ ವಹಿಸಲು ‘ಬೆಂಗಳೂರು ಗೇಟ್’ ಚೌಕಿ ನಿರ್ಮಿಸಲಾಗಿತ್ತು. ಕಾವಲುಗಾರರು ಈ ಚೌಕಿಯಲ್ಲಿರುತ್ತಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು