ಬೆಂಗಳೂರು: ನಗರದ ರಸ್ತೆಗಳ ಗುಣಮಟ್ಟ ಹೆಚ್ಚಿಸಲು ನಗರದ 1,600 ಕಿ.ಮೀನಷ್ಟು ಉದ್ದದ ರಸ್ತೆಗಳನ್ನು ಬ್ಲ್ಯಾಕ್ ಮತ್ತು ವೈಟ್ ಟಾಪಿಂಗ್ ಮಾಡಲಾಗುತ್ತದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ 10 ವಿಧಾನಸಭಾ ಕ್ಷೇತ್ರಗಳಲ್ಲಿ ರಸ್ತೆಗಳ ಅಭಿವೃದ್ಧಿ ಕಾಮಗಾರಿಗಳಿಗೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.

ನಗರದಲ್ಲಿ ಈ ಹಿಂದೆ 196 ಕಿ.ಮೀ ಉದ್ದದ ರಸ್ತೆ ಕಾಮಗಾರಿ ನಡೆಸಲಾಗಿತ್ತು. ಈಗ 450 ಕಿ.ಮೀ ಉದ್ದದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಇನ್ನೂ 350 ಕಿ.ಮೀ ಉದ್ದದ ಕಾಮಗಾರಿ ನಿರ್ವಹಣಾ ಅವಧಿ ಬಾಕಿ ಉಳಿದಿದ್ದು, ಈ ರಸ್ತೆಗಳಲ್ಲಿ ಹಾನಿಯಾದರೆ ಗುತ್ತಿಗೆದಾರರೇ ಅದನ್ನು ಸರಿಪಡಿಸಬೇಕಾಗುತ್ತದೆ. ಹೀಗಾಗಿ ಈ ರಸ್ತೆಯ ಕಾಮಗಾರಿ ಕೈಗೆತ್ತಿಕೊಂಡಿಲ್ಲ ಎಂದು ಮಾಹಿತಿ ನೀಡಿದರು.

‘ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ರಸ್ತೆಗಳ ಉನ್ನತೀಕರಣಕ್ಕೆ ಮುಖ್ಯಮಂತ್ರಿಯವರು ಬಜೆಟ್ನಲ್ಲಿ ₹6 ಸಾವಿರ ಕೋಟಿ ನೀಡಿದ್ದಾರೆ. ನಗರದ ಮುಕ್ಕಾಲು ಭಾಗದ ರಸ್ತೆಯನ್ನು ಬ್ಲ್ಯಾಕ್ ಹಾಗೂ ವೈಟ್ ಟಾಪಿಂಗ್ ಮಾಡಲಾಗುತ್ತದೆ. ಈ ರಸ್ತೆಗಳು 30 ವರ್ಷ ಬಾಳಿಕೆ ಬರುತ್ತವೆ. ಗುಣಮಟ್ಟದ ಕಾಮಗಾರಿ ನಡೆಯುತ್ತಿದ್ದು, ನಾನೇ ಈ ರಸ್ತೆ ಕಾಮಗಾರಿಗಳನ್ನು ಪರಿಶೀಲಿಸಿದ್ದೇನೆ. 1,600 ಕಿ.ಮೀ ಉದ್ದದ ಮುಖ್ಯ ಹಾಗೂ ಉಪ ಮುಖ್ಯ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗುತ್ತದೆ. ಎಲ್ಲ ಕಾಮಗಾರಿಗಳ ಗುಣಮಟ್ಟ ಪರೀಕ್ಷೆಗೆ ಪ್ರತ್ಯೇಕ ತಂಡ ರಚಿಸಲಾಗಿದೆ’ ಎಂದರು.

‘ನಗರ ಪೊಲೀಸ್ ಜಂಟಿ ಕಮಿಷನರ್ ಜತೆ ಚರ್ಚೆ ನಡೆಸಿದ್ದು, ಎಲ್ಲೆಲ್ಲಿ ರಸ್ತೆ ಸರಿಯಿಲ್ಲ ಎಂದು ಪೊಲೀಸರ ಗಮನಕ್ಕೆ ಬರುತ್ತದೆಯೋ ಅದನ್ನು ಪಾಲಿಕೆ ಆಯುಕ್ತರಿಗೆ ತಿಳಿಸಬೇಕು ಎಂದು ತಿಳಿಸಿದ್ದೇನೆ. ರಸ್ತೆ ಹದಗೆಟ್ಟಿರುವುದು ನಮ್ಮ ಎಂಜಿನಿಯರ್ಗಳು, ಶಾಸಕರ ಕಣ್ಣಿಗೆ ಕಾಣದಿರಬಹುದು. ಆದರೆ ಪೊಲೀಸ್ ಇಲಾಖೆಯವರ ಗಮನಕ್ಕೆ ಬಂದರೆ ಅದನ್ನು ಲಿಖಿತ ರೂಪದಲ್ಲಿ ಮಾಹಿತಿ ನೀಡುವಂತೆ ಸೂಚಿಸಿದ್ದೇನೆ’ ಎಂದು ತಿಳಿಸಿದರು.

‘ಕಸದ ಸಮಸ್ಯೆಯನ್ನು ನಾವು ನಿಭಾಯಿಸುತ್ತಿದ್ದೇವೆ. ಯಾರು ಏನೇ ಟೀಕೆ ಮಾಡಿದರೂ, ಸಮಸ್ಯೆ ಬಗೆಹರಿಸುವುದು ನಮ್ಮ ಜವಾಬ್ದಾರಿ. ಇದಕ್ಕಾಗಿ ಟೆಂಡರ್ಗಳನ್ನು ಕರೆಯಲಾಗಿದೆ. ನಾವು ನಮ್ಮ ಕೆಲಸ ಮಾಡುತ್ತೇವೆ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ’ ಎಂದರು.

ಬ್ಲ್ಯಾಕ್ ಟಾಪಿಂಗ್ ವೈಶಿಷ್ಟ್ಯ

* ಮಳೆ ನೀರಿನಿಂದ ರಸ್ತೆ ಹಾಳಾಗದಂತೆ ಕ್ಯಾಂಬರ್ ಸ್ಲೋಪ್ ನೀಡಿ ರಸ್ತೆಯ ಮೇಲ್ಮೈ ಅನ್ನು ಹೊಸದಾಗಿ ನಿರ್ಮಿಸುವುದು

* ಮೈಕ್ರೊ ಸರ್ಫೇಸಿಂಗ್ ಮಾಡಿ ಮಳೆ ನೀರು ರಸ್ತೆಯೊಳಗೆ ಇಂಗದಂತೆ ಲಂಬಾಕಾರದ ರಸ್ತೆ ಗ್ರೇಟಿಂಗ್ ನಿರ್ಮಾಣ

* ಪಾದಚಾರಿ ಮಾರ್ಗ ಮತ್ತು ರಸ್ತೆಯ ಮಟ್ಟವನ್ನು ಏಕರೂಪದ ಮಟ್ಟದಲ್ಲಿ ನಿರ್ಮಿಸುವುದು

* ಹೆಗ್ಗಣಗಳಿಂದ ಕೊರೆತ ತಪ್ಪಿಸಲು ಪಾದಚಾರಿ ಮಾರ್ಗದ ತಳಪಾಯ ಕಾಂಕ್ರೀಟ್ನಲ್ಲಿ ಗಟ್ಟಿಮುಟ್ಟಾಗಿ ನಿರ್ಮಿಸುವುದು

* ರಸ್ತೆಯ ಮಳೆನೀರು ಚರಂಡಿಯೊಳಗೆ ಹರಿದು ದೊಡ್ಡ ಕಾಲುವೆಗೆ ಸೇರುವಂತೆ ಚರಂಡಿ ಜಾಲ ವಿಸ್ತರಿಸುವುದು *ರಸ್ತೆಯ ಜೊತೆಗೆ ಪಾದಚಾರಿ ಮಾರ್ಗ ನಿರ್ಮಿಸಿ ಲೇನ್ ಮಾರ್ಕಿಂಗ್ ಕ್ಯಾಟ್ ಐಸ್ ಸುರಕ್ಷತಾ ಫಲಕಗಳನ್ನು ಅಳವಡಿಸುವುದು

ಎಲ್ಲೆಲ್ಲಿ ರಸ್ತೆ ಅಭಿವೃದ್ಧಿಗೆ ಚಾಲನೆ?

ವಿಧಾನಸಭೆ ಕ್ಷೇತ್ರ;ವೆಚ್ಚ ಮಲ್ಲೇಶ್ವರ/ಗಾಂಧಿನಗರ;₹16 ಕೋಟಿ ಮಹಾಲಕ್ಷ್ಮಿಲೇಔಟ್;₹15.5 ಕೋಟಿ ಆರ್.ಆರ್. ನಗರ;₹20 ಕೋಟಿ ಯಶವಂತಪುರ; ₹75 ಕೋಟಿ ಬಸವನಗುಡಿ;₹20 ಕೋಟಿ ಚಿಕ್ಕಪೇಟೆ;₹20 ಕೋಟಿ ಶಿವಾಜಿನಗರ;₹21 ಕೋಟಿ ಒಟ್ಟು;₹187.50 ಕೋಟಿ

‘ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿ’

ಬೆಂಗಳೂರು: ನಗರ ಜಿಲ್ಲೆಯಲ್ಲಿರುವ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಂಡು ಎಲ್ಲ ಕೆರೆಗಳಿಗೂ ಸಂಸ್ಕರಿಸಿದ ನೀರನ್ನೇ ತುಂಬಿಸಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದರು.

ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅಧಿಕಾರಿಗಳಿಗೆ ಆದೇಶ ನೀಡಿದರು. ಕೆರೆಗಳ ಸಂರಕ್ಷಣೆ ದೃಷ್ಟಿಯಿಂದ ಸಂಸ್ಕರಿಸಿದ ನೀರನ್ನು ತುಂಬಿಸುವ ಜವಾಬ್ದಾರಿಯನ್ನು ಬೆಂಗಳೂರು ಜಲಮಂಡಳಿಗೆ ವಹಿಸಲು ನಿರ್ಣಯ ಕೈಗೊಳ್ಳಲಾಯಿತು. ಇದರ ಜತೆಗೆ ಬೆಂಗಳೂರು ನಗರ ಜಿಲ್ಲೆಗೆ ಬಂದೊದಗಬಹುದಾದ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈಗಿನಿಂದಲೇ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಸೂಚನೆ ನೀಡಿದರು. ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಹಳ್ಳಿಗಳಿಗೆ ಬೆಂಗಳೂರು ಜಲಮಂಡಳಿ ವತಿಯಿಂದ ಕುಡಿಯುವ ನೀರು ಪೂರೈಸಲು ಚರ್ಚಿಸಲಾಯಿತು.

ನಗರದಲ್ಲಿ ಕಟ್ಟಡ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಸುರಿಯುತ್ತಿರುವುದನ್ನು ತಪ್ಪಿಸಲು ತ್ಯಾಜ್ಯ ಸಾಗಿಸುವ ಲಾರಿಗಳಿಗೆ ಜಿಪಿಎಸ್ ಅಳವಡಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಈ ಲಾರಿಗಳು ಕಸವನ್ನು ಎಲ್ಲಿಂದ ಸಂಗ್ರಹಿಸಿ ಎಲ್ಲಿ ವಿಲೇವಾರಿ ಮಾಡುತ್ತವೆ ಎಂದು ಮೇಲ್ವಿಚಾರಣೆ ಮಾಡಬೇಕು ಎಂದು ಬಿಬಿಎಂಪಿ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಶಿವಕುಮಾರ್ ನಿರ್ದೇಶನ ನೀಡಿದರು.

‘ಯಶವಂತಪುರ ವೃತ್ತದ ಬಳಿ ಸುಮಾರು 15 ಲೋಡ್ಗಳಷ್ಟು ಕಟ್ಟಡ ತ್ಯಾಜ್ಯವನ್ನು ರಸ್ತೆ ಪಕ್ಕದಲ್ಲಿ ಸುರಿದಿರುವುದನ್ನು ನಾನು ಹಾಗೂ ಪಾಲಿಕೆ ಆಯುಕ್ತರು ನೋಡಿದೆವು. ಹೀಗಾಗಿ ಎಲ್ಲ ತ್ಯಾಜ್ಯ ಸಾಗಿಸುವ ಲಾರಿ ಹಾಗೂ ವಾಹನಗಳಿಗೆ ಜಿಪಿಎಸ್ ಅಳವಡಿಸಬೇಕು ಎಂದು ಸೂಚಿಸಲಾಗಿದೆ’ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.