ರಾಜರಜೇಶ್ವರಿನಗರ: ‘ಕ್ಷೇತ್ರದ ಅಭಿವೃದ್ಧಿಗೆ ಅನುದಾನ ನೀಡಿದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರ ಬಗೆ ಎರಡು ಒಳ್ಳೆಯ ಮಾತನಾಡಿರುವುದನ್ನು ಹೊರತುಪಡಿಸಿ, ಎಲ್ಲಿಯೂ ಬಿಜೆಪಿ ವಿರುದ್ಧ ಪಕ್ಷ ವಿರೋಧಿ ಚಟುವಟಿಕೆ ನಡೆಸಿಲ್ಲ’ ಎಂದು ಶಾಸಕ ಎಸ್.ಟಿ.ಸೋಮಶೇಖರ್ ಹೇಳಿದರು.

ಸುಂಕದಕಟ್ಟೆಯಿಂದ ಬ್ಯಾಡರಹಳ್ಳಿ, ನೈಸ್ ರಸ್ತೆವರೆಗೆ ₹18 ಕೋಟಿ ವೆಚ್ಚದಲ್ಲಿ ಕೈಗೊಂಡಿರುವ ಪಾದಚಾರಿ ಮಾರ್ಗ ಅಭಿವೃದ್ದಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಯಶವಂತಪುರ ವಿಧಾನಸಭಾ ಕ್ಷೇತ್ರ ಬಹಳ ವಿಸ್ತಾರವಾಗಿದೆ. ಕ್ಷೇತ್ರದ ಅಭಿವೃದ್ದಿಗಾಗಿ ಸರ್ಕಾರ ನೂರಾರು ಕೋಟಿ ರೂಪಾಯಿ ಅನುದಾನ ನೀಡಿದೆ. ಕಾವೇರಿ ಕುಡಿಯುವ ನೀರು ಸಂಪರ್ಕ ಕಲ್ಪಿಸಿದೆ. ಗ್ರಾಮೀಣ ಭಾಗದಲ್ಲಿ ಮನೆಮನೆಗೆ ನೀರಿನ ಸಂಪರ್ಕ ಕಲ್ಪಿಸಿದೆ. ಹೀಗಿರುವಾಗ ಕಾಂಗ್ರೆಸ್ನವರ ಬಗ್ಗೆ ಒಳ್ಳೆಯ ಮಾತನಾಡಬಾರದೇ‘ ಎಂದು ಪ್ರಶ್ನಿಸಿದರು.

ಹೇರೋಹಳ್ಳಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಶ್ರೀಧರ್, ಪ್ರವಾಸೋಧ್ಯಮ ನಿಗಮದ ಮಾಜಿ ನಿರ್ದೇಶಕ ಎಂ.ಸತೀಶ್, ತಾ.ಪಂ.ಮಾಜಿ ಸದಸ್ಯ ವಿ.ರಘು, ಎಂ.ಗಂಗರಾಜು, ರಮೇಶ್ ಆದಿತ್ಯ, ಕುಮಾರ್, ಪ್ರಕಾಶ್, ರಮೇಶ್, ಲೋಕೇಶ್, ಸುಮ ಜನಾರ್ದನ್, ರೋಹಿಣಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.