ಬೆಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟದ ವಿರುದ್ಧ ವಿವಿಧ ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 11 ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 190 ಕೆ.ಜಿ. ಗಾಂಜಾ ಜಪ್ತಿ ಮಾಡಿಕೊಳ್ಳಲಾಗಿದೆ. ಇದರ ಮೌಲ್ಯ ₹1.21 ಕೋಟಿಯೆಂದು ಅಂದಾಜಿಸಲಾಗಿದೆ.

ಅಶೋಕ ನಗರ ಠಾಣೆಯ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಹಿಂದೂಪುರ ತಾಲ್ಲೂಕಿನ ಮನೆಪಲ್ಲೆ ನಿವಾಸಿ, ಬೆಂಗಳೂರು ವೀರೇಶ್ ನಗರದಲ್ಲಿ ನೆಲಸಿದ್ದ ಶ್ರೀಕಾಂತ್(24), ಆರ್.ಟಿ. ನಗರದ ನಿವಾಸಿ ಮುನಿರಾಜ್(27), ಚಾಮುಂಡೇಶ್ವರಿ ನಗರದ ಚಂದ್ರಕಾಂತ್(24) ಹಾಗೂ ಆನೇಕಲ್ ತಾಲ್ಲೂಕು ಕಲ್ಲಬಾಳು ಗ್ರಾಮದ ವಿ.ಬಾಲಕೃಷ್ಣ ಬಂಧಿತರು.

ಕೊಲೆ ಪ್ರಕರಣದಲ್ಲಿ ಬಾಲಕೃಷ್ಣ ಅವರು ಈಗಾಗಲೇ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಸಜಾ ಬಂಧಿ ಆಗಿದ್ದಾನೆ. ಅವನನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದು ವಿಚಾರಣೆ ನಡೆಸಿ ಬಂಧಿಸಲಾಗಿದೆ.

ಬಂಧಿತರಿಂದ 76 ಕೆ.ಜಿ. ಗಾಂಜಾ, ಮೂರು ಮೊಬೈಲ್ ಫೋನ್ ಹಾಗೂ ಗಾಂಜಾ ಸಾಗಣೆಗೆ ಬಳಸುತ್ತಿದ್ದ ಒಂದು ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ. ಇವುಗಳ ಮೌಲ್ಯ ₹30 ಲಕ್ಷ ಎಂದು ಅಂದಾಜಿಸಲಾಗಿದೆ.

ಬನ್ನೇರುಘಟ್ಟದಿಂದ ಹೊಸೂರು ಕಡೆಗೆ ತೆರಳುವ ರಸ್ತೆಯ ರುದ್ರಭೂಮಿ ಬಳಿ ಮೂವರು ಆರೋಪಿಗಳು ವಾಹನದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ಹೇಳಿದರು.

‘ಜೈಲಿನಲ್ಲಿರುವ ಬಾಲಕೃಷ್ಣ ಎಂಬಾತ ನೀಡಿದ ಸೂಚನೆ ಮೇರೆಗೆ ಮೂವರು ಆರೋಪಿಗಳು ಆಂಧ್ರಪ್ರದೇಶದ ವಿಶಾಖಪಟ್ಟಣ ಬಳಿಯ ತುನಿ ಗ್ರಾಮದಲ್ಲಿ ಕಡಿಮೆ ಬೆಲೆಗ ಗಾಂಜಾ ಖರೀದಿಸಿ ನಗರದಲ್ಲಿ ಮಾರಾಟ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.

ಗಾಂಜಾ ಮಾರಾಟ ಮಾಡುತ್ತಿದ್ದ ಜೋನ್ಸ್, ಸ್ಟಾಲಿನ್, ಮರಿಯಾ ಸೆಲ್ವಾ ಎಂಬುವವರನ್ನು ಬಾಣಸವಾಡಿ ಪೊಲೀಸರು ಬಂಧಿಸಿದ್ದಾರೆ. ಇವರಿಂದ ₹15 ಲಕ್ಷ ಮೌಲ್ಯದ 15 ಕೆ.ಜಿ ಗಾಂಜಾ ಹಾಗೂ ಮೂರು ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

‘ಆರೋಪಿಗಳು, ಕನಕದಾಸ ಲೇಔಟ್ನ ಆರ್ಎಸ್ ಪಾಳ್ಯದ ಮನೆಯೊಂದರಲ್ಲಿ ಗಾಂಜಾ ದಾಸ್ತಾನು ಮಾಡಿಕೊಂಡು ಮಾರಾಟ ಮಾಡುತ್ತಿದ್ದರು. ಖಚಿತ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು’ ಎಂದು ಪೊಲೀಸರು ಹೇಳಿದರು.

ಇನ್ನು ಯಲಹಂಕ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಿಂದ 93 ಕೆ.ಜಿ. ಗಾಂಜಾ, ಟ್ರಕ್, ಇನ್ನೊವಾ ಕಾರು, ನಾಲ್ಕು ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ. ಇವುಗಳ ಮೌಲ್ಯ ₹74.53 ಲಕ್ಷವೆಂದು ಅಂದಾಜಿಸಲಾಗಿದೆ.

ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಆರೋಪಿಗಳು ಗಾಂಜಾ ಮಾರಾಟ ಮಾಡುತ್ತಿದ್ದರು. ಬಾತ್ಮೀದಾರರು ನೀಡಿದ ಮಾಹಿತಿ ಆಧರಿಸಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಲಾಯಿತು ಎಂದು ಪೊಲೀಸರು ತಿಳಿಸಿದರು. ಹೊಸ ವರ್ಷದ ಪಾರ್ಟಿಗಳಿಗೆ ಗಾಂಜಾ ಪೂರೈಸಲು ದಾಸ್ತಾನು ಮಾಡಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಅಮೃತಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 5 ಕೆ.ಜಿ. ಗಾಂಜಾ ವಶಕ್ಕೆ ಪಡೆದುಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.