ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಲಹಂಕ: 518 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ 

ಹೆಬ್ಬಾಳದ ಏಟ್ರಿಯಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ 19ನೇ ಘಟಿಕೋತ್ಸವ ಆಯೋಜಿಸಲಾಗಿದೆ.
Published 9 ಮೇ 2023, 9:31 IST
Last Updated 9 ಮೇ 2023, 9:31 IST
ಅಕ್ಷರ ಗಾತ್ರ

ಯಲಹಂಕ: ಹೆಬ್ಬಾಳದ ಏಟ್ರಿಯಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ 19ನೇ ಘಟಿಕೋತ್ಸವ ಸಮಾರಂಭದಲ್ಲಿ ವಿವಿಧ ವಿಭಾಗಗಳಲ್ಲಿ ಪದವಿ ಹಾಗೂ ಸ್ನಾತಕ ಪದವಿ ಪೂರ್ಣಗೊಳಿಸಿದ 518 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.

ರ‍್ಯಾಂಕ್‌ ಗಳಿಸಿದ ಇಬ್ಬರು ವಿದ್ಯಾರ್ಥಿಗಳಿಗೆ ಚಿನ್ನದ ಪದಕ ನೀಡುವ ಜತೆಗೆ ಪ್ರತಿಭಾವಂತ 6 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಎಂಬಿಎ ಪದವಿ ಪೂರ್ಣಗೊಳಿಸಿದ 40 ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ವಿತರಿಸಲಾಯಿತು.

ಈ ವೇಳೆ ಮಾತನಾಡಿದ ಡೆಲ್ ಟೆಕ್ನಾಲಜೀಸ್‌ನ ಸಾಫ್ಟ್‌ವೇರ್‌ ಎಂಜಿನಿಯರಿಂಗ್ ವಿಭಾಗದ ನಿರ್ದೇಶಕ ಸುದಾಂಶು ಸಾಹು, ವಿದ್ಯಾರ್ಥಿಗಳು ಪದವಿಗಳನ್ನು ಪೂರ್ಣಗೊಳಿಸಿ, ವಾಸ್ತವಪ್ರಪಂಚಕ್ಕೆ ಕಾಲಿಟ್ಟ ನಂತರ ಹಲವಾರು ಸ್ಪರ್ಧೆ ಮತ್ತು ಸವಾಲುಗಳು ಎದುರಾಗುತ್ತವೆ. ನಿರಂತರ ಕಲಿಕೆಯ ಮೂಲಕ ಜಗತ್ತಿನಲ್ಲಿ ನಡೆಯುತ್ತಿರುವ ಪ್ರಚಲಿತ ವಿದ್ಯಮಾನಗಳು ಹಾಗೂ ಬೆಳವಣಿಗೆಗಳನ್ನು ಗಮನಿಸಬೇಕು ಎಂದು ಸಲಹೆ ನೀಡಿದರು.

ಪ್ರಾಂಶುಪಾಲ ಡಾ.ವೈ. ವಿಜಯಕುಮಾರ್, ಟ್ರಸ್ಟಿ ಕೆ. ನಾಗರಾಜು, ಕುಲಸಚಿವ ಕೆ.ವಿ. ನಾರಾಯಣಸ್ವಾಮಿ, ಮೈಕ್ರೋಸಾಫ್ಟ್ ಟೆಕ್ನಾಲಜೀಸ್‌ ಕಾರ್ಯಕ್ರಮ ವ್ಯವಸ್ಥಾಪಕಿ ಚಂದ್ರಶ್ರೀ ಸಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT