ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಒಟ್ಟು 7,80,748 ಮಂಜೂರಾದ ಹುದ್ದೆಗಳ ಪೈಕಿ 5,04,362 ಹುದ್ದೆಗಳು ಮಾತ್ರ ಭರ್ತಿ ಇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆಗೆ ಮಂಗಳವಾರ ತಿಳಿಸಿದ್ದಾರೆ.

ಕಾಂಗ್ರೆಸ್ನ ರವಿಕುಮಾರಗೌಡ (ಗಣಿಗ) ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಮುಖ್ಯಮಂತ್ರಿ, ‘ಎ’ ದರ್ಜೆಯ 16,017, ‘ಬಿ’ ದರ್ಜೆಯ 16,734, ‘ಸಿ’ ದರ್ಜೆಯ 1,66,021 ಮತ್ತು ‘ಡಿ’ ದರ್ಜೆಯ 77,614 ಹುದ್ದೆಗಳು ಖಾಲಿ ಇವೆ ಎಂಬ ಮಾಹಿತಿ ಒದಗಿಸಿದ್ದಾರೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ ಅತ್ಯಧಿಕ 70,727 ಹುದ್ದೆಗಳು ಖಾಲಿ ಇವೆ. ಈ ಇಲಾಖೆಯಲ್ಲಿ ಒಟ್ಟು 2,84,086 ಹುದ್ದೆಗಳ ಮಂಜೂರಾತಿ ಇದೆ. ಈ ಪೈಕಿ ‘ಸಿ’ ದರ್ಜೆ ಒಂದರಲ್ಲೇ 60,219 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದ್ದಾರೆ.

ಗೃಹ ಇಲಾಖೆಯಲ್ಲಿ 26,168, ಉನ್ನತ ಶಿಕ್ಷಣ ಇಲಾಖೆಯಲ್ಲಿ 13,227, ಕಂದಾಯ ಇಲಾಖೆಯಲ್ಲಿ 11,145, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ 10,898, ಪಶುಸಂಗೋಪನಾ ಇಲಾಖೆಯಲ್ಲಿ 10,755, ಸಮಾಜ ಕಲ್ಯಾಣ ಇಲಾಖೆಯಲ್ಲಿ 9,980, ಆರ್ಥಿಕ ಇಲಾಖೆಯಲ್ಲಿ 9,536, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ 8,334 ಹುದ್ದೆಗಳು ಖಾಲಿ ಇವೆ ಎಂದು ಮಾಹಿತಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.