ಶುಕ್ರವಾರ, 24 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಬ್ಬರು ರೌಡಿಗಳ ಬಂಧನ

Published 19 ಏಪ್ರಿಲ್ 2024, 18:20 IST
Last Updated 19 ಏಪ್ರಿಲ್ 2024, 18:20 IST
ಅಕ್ಷರ ಗಾತ್ರ

ಬೆಂಗಳೂರು: ಇಬ್ಬರು ರೌಡಿ ಶೀಟರ್‌ಗಳನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಬಂದೂಕು ವಶಕ್ಕೆ ಪಡೆದುಕೊಂಡಿದ್ದಾರೆ. ಅವರ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಪ್ರಕರಣವನ್ನು ಕಾಮಾಕ್ಷಿಪಾಳ್ಯ ಪೊಲೀಸ್‌ ಠಾಣೆಗೆ ಹಸ್ತಾಂತರಿಸಿದ್ಧಾರೆ. ಬಂಧಿತರಿಂದ ಮೂರು ಚಾಕು ವಶಕ್ಕೆ ಪಡೆದುಕೊಳ್ಳಲಾಗಿದೆ.

ಕೆಂಗೇರಿ ಆರ್‌.ಎಸ್‌.ಸುನಿಲ್‌ ಅಲಿಯಾಸ್‌ ಸಿಲಿಂಡರ್‌ ಸುನಿಲ್‌ ಹಾಗೂ ಈತನ ಸಹಚರ ಅವಿನಾಶ್‌ ಬಂಧಿತರು.

ಸುನಿಲ್ ವಿರುದ್ಧ ಕೆಂಗೇರಿ ಪೊಲೀಸ್‌ ಠಾಣೆಯಲ್ಲಿ 4, ಕಾಮಾಕ್ಷಿಪಾಳ್ಯದಲ್ಲಿ 2, ರಾಜಗೋಪಾಲ ನಗರದಲ್ಲಿ 1 ಮಾಗಡಿ ರಸ್ತೆ ಪೊಲೀಸ್‌ ಠಾಣೆಯಲ್ಲಿ 4, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ 1 ಸೇರಿದಂತೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ. ಈತನ ಸಹಚರ ಅವಿನಾಶ್ ವಿರುದ್ಧ 3 ಪ್ರಕರಣಗಳಿವೆ ಎಂದು ಪೊಲೀಸರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT