ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಾರಿಯಲ್ಲಿ ಸಾಗಿಸುತ್ತಿದ್ದ 2 ಟನ್‌ ಗಾಂಜಾ ಜಪ್ತಿ

Last Updated 21 ಜೂನ್ 2021, 16:20 IST
ಅಕ್ಷರ ಗಾತ್ರ

ಬೆಂಗಳೂರು: ಒಡಿಶಾದಿಂದ ತೆಲಂಗಾಣ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 2 ಟನ್ (2,000 ಕೆ.ಜಿ) ಗಾಂಜಾವನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ (ಎನ್‌ಸಿಬಿ) ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

‘ಗಾಂಜಾ ಸಾಗಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ಬಂದಿತ್ತು. ಬೆಂಗಳೂರು ಹಾಗೂ ಹೈದರಾಬಾದ್ ಉಪವಲಯಗಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಗಾಂಜಾ ಜಪ್ತಿ ಮಾಡಿದ್ದಾರೆ. ಎನ್‌ಸಿಬಿಯಿಂದ 2 ಟನ್ ಗಾಂಜಾ ಜಪ್ತಿ ಮಾಡಿದ ಪ್ರಕರಣ ಇದೇ ಮೊದಲು’ ಎಂದು ಎನ್‌ಸಿಬಿ ವಲಯ ನಿರ್ದೇಶಕ ಅಮಿತ್ ಘಾವಟೆ ’ಪ್ರಜಾವಾಣಿ’ಗೆ ತಿಳಿಸಿದರು.

‘ಒಡಿಶಾದಲ್ಲಿ ಖರೀದಿಸಿದ್ದ ಗಾಂಜಾವನ್ನು 1,080 ಪೊಟ್ಟಣಗಳಲ್ಲಿ ತುಂಬಲಾಗಿತ್ತು. ಅದನ್ನೇ ಲಾರಿಯಲ್ಲಿ ತುಂಬಿ, ಅದರ ಮೇಲೆ ತಾಡಪತ್ರಿ ಮುಚ್ಚಿ ಸಾಗಣೆ ಮಾಡಲಾಗುತ್ತಿತ್ತು. ಹೈದರಾಬಾದ್‌ನ ಟೋಲ್‌ಗೇಟೊಂದರ ಬಳಿ ಲಾರಿ ತಡೆದು ಪರಿಶೀಲನೆ ನಡೆಸಿದಾಗ ಕೃತ್ಯ ಬಯಲಾಯಿತು’ ಎಂದೂ ಹೇಳಿದರು.

‘ಗಾಂಜಾ ಸಾಗಿಸುತ್ತಿದ್ದ ಆರೋಪದಡಿ ಚಾಲಕ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ’ ಎಂದೂ ತಿಳಿಸಿದರು.

‘ಮುಂಬೈ ಹಾಗೂ ಪುಣೆಯಲ್ಲಿ ಮಾರಾಟ ಮಾಡಲು ಈ ಗಾಂಜಾ ಸಾಗಿಸಲಾಗುತ್ತಿತ್ತು ಎಂಬ ಮಾಹಿತಿ ಇದೆ. ಈ ಜಾಲದಲ್ಲಿ ಮತ್ತಷ್ಟು ಮಂದಿ ಭಾಗಿಯಾಗಿದ್ದು, ಅವರಿಗಾಗಿ ಶೋಧ ಮುಂದುವರಿದಿದೆ’ ಎಂದೂ ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT