ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ₹7.5 ಲಕ್ಷ ಕೋಟಿ ಬಂಡವಾಳ ಹೂಡಿಕೆ ಆಕರ್ಷಿಸುವ ಮತ್ತು 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಉದ್ದೇಶ ಇದೆ. ಮೂರು ತಿಂಗಳ ಬಳಿಕ ಮತ್ತೊಮ್ಮೆ ಸಾಧಕ–ಬಾಧಕಗಳ ಬಗ್ಗೆ ಚರ್ಚಿಸಲಾಗುವುದು ಎಂದು ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದರು.

ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ ಕಾಯಕಲ್ಪ ಕುರಿತು 60 ಕಂಪನಿಗಳ 80 ಮುಖ್ಯಸ್ಥರು ಮತ್ತು ಸಿಇಒಗಳೊಂದಿಗೆ ನಗರದಲ್ಲಿ ಮಂಗಳವಾರ ನಡೆದ ಉತ್ಪಾದನಾ ಮಂಥನ’ ಸಮಾವೇಶದಲ್ಲಿ ಅವರು ಮಾತನಾಡಿದರು.

ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರ್ಕಾರವು 6 ಪ್ರಮುಖ ವಲಯಗಳ ಪ್ರಗತಿಗೆ ಪ್ರತ್ಯೇಕ ಕಾರ್ಯಪಡೆಗಳನ್ನು ರಚಿಸಲಿದೆ. ಇದಕ್ಕೆ ಬೇಕಾದ ಸಮಗ್ರ ಟೌನ್ಶಿಪ್ಗಳ ಅಭಿವೃದ್ಧಿ, ಕೈಗಾರಿಕಾ ಪ್ರದೇಶಗಳಿಂದ ಮಂಗಳೂರು ಮತ್ತು ಚೆನ್ನೈ ಬಂದರುಗಳಿಗೆ ಸಂಪರ್ಕ ಸೇರಿದಂತೆ ಪ್ರತಿಯೊಂದು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ವಿವರಿಸಿದರು.

ಏರೋಸ್ಪೇಸ್ ಮತ್ತು ರಕ್ಷಣೆ, ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್, ಕ್ಯಾಪಿಟಲ್ ಗೂಡ್ಸ್ ಮತ್ತು ರೋಬೋಟಿಕ್ಸ್, ಆಟೊ ಮತ್ತು ಎಲೆಕ್ಟ್ರಿಕ್ ವಾಹನಗಳು, ಜವಳಿ ಹಾಗೂ ಪಾದರಕ್ಷೆ, ಆಟಿಕೆ ಮತ್ತು ಎಫ್ಎಂಸಿಜಿ ಉತ್ಪನ್ನಗಳ ಮೇಲೆ ಗಮನ ಕೇಂದ್ರೀಕರಿಸಲಾಗುವುದು ಎಂದರು.

ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ ವಲಯಕ್ಕೆ ಅನುಕೂಲವಾಗುವಂತೆ ಐಚ್ಛಿಕ ಕೋರ್ಸ್ ಆರಂಭಿಸಬೇಕು, ಸುಗಮ ವಹಿವಾಟಿಗೆ ಕಸ್ಟಮ್ಸ್ ವ್ಯವಸ್ಥೆ ಸರಳವಾಗಬೇಕು, ಪ್ಲಗ್ ಅಂಡ್ ಪ್ಲೇ ಮಾದರಿಯಲ್ಲಿ ಕೈಗಾರಿಕಾ ಟೌನ್ಶಿಪ್ಗಳು ನಿರ್ಮಾಣವಾಗಬೇಕು, ಆಧುನಿಕ ತಯಾರಿಕಾ ಸಂಸ್ಥೆ ಬರಬೇಕು, ದಕ್ಷಿಣ ಕೊರಿಯಾದಂತಹ ದೇಶಗಳಲ್ಲಿ ರಾಜ್ಯವು ನಿರ್ದಿಷ್ಟ ವ್ಯಾಪಾರ ಕೇಂದ್ರ ಪ್ರಾರಂಭಿಸಬೇಕು, ಪರಿಸರ ಮತ್ತು ಅರಣ್ಯ ಇಲಾಖೆಯಿಂದ ಅನುಮೋದನೆ ಪಡೆಯುವ ಪ್ರಕ್ರಿಯೆ ಸರಳವಾಗಬೇಕು ಎಂಬ ಸಲಹೆಗಳನ್ನು ಉದ್ಯಮಿಗಳು ನೀಡಿದ್ದಾರೆ. ಸರ್ಕಾರ ಇವೆಲ್ಲವನ್ನೂ ಸಕಾರಾತ್ಮಕವಾಗಿ ಸ್ವೀಕರಿಸಿ, ರಚನಾತ್ಮಕ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಸಚಿವರು ಭರವಸೆ ನೀಡಿದರು.

ಉತ್ಪಾದನಾ ಮಂಥನದಲ್ಲಿ ಆ್ಯಕ್ಸೆಲ್ ಕಂಪನಿಯ ಸ್ಥಾಪಕ ಪಾಲುದಾರ ಪ್ರಶಾಂತ್ ಪ್ರಕಾಶ್, ಏಕಸ್ ಕಂಪನಿಯ ಮುಖ್ಯಸ್ಥ ಅರವಿಂದ್ ಮೆಳ್ಳಿಗೇರಿ, ಡೆಲ್ಟಾ ಎಲೆಕ್ಟ್ರಾನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ನಿರಂಜನ್ ನಾಯಕ್, ಅಪ್ಲೈಡ್ ಮೆಟೀರಿಯಲ್ಸ್ ಮುಖ್ಯಸ್ಥ ಅವಿನಾಶ ಅವುಲಾ, ಕ್ರೋನ್ಸ್ ವ್ಯವಸ್ಥಾಪಕ ನಿರ್ದೇಶಕ ಹರೀಶ್ ಹನಗೂಡು, ವಿಂಗ್ಸ್ ಆಗ್ರೊ ಸಿಇಒ ಹಿರೇನ್ ಸೋಧಾ, ಶಾಹಿ ಎಕ್ಸ್ಪೋರ್ಟ್ ಮುಖ್ಯಸ್ಥ ಪಿ.ಬಿ. ಆನಂದ್, ನಾರ್ ಬ್ರೆಮ್ಸ್ ಸಿಟಿಒ ಶ್ರೀಕಿರಣ್ ಕೋಸನಂ ಮತ್ತು ನ್ಯೂಸ್ಪೇಸ್ ಕಂಪನಿಯ ಸಹ ಸಂಸ್ಥಾಪಕ ದಿಲೀಪ್ ಛಾಬ್ರಿಯಾ ಪಾಲ್ಗೊಂಡಿದ್ದರು.

ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಒ ಡಾ.ಮಹೇಶ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.