ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

TDP ಶಾಸಕರ ವಿರುದ್ಧ ವಂಚನೆ ಆರೋಪ; CBI ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

Last Updated 23 ಮೇ 2022, 19:31 IST
ಅಕ್ಷರ ಗಾತ್ರ

ಬೆಂಗಳೂರು: ‘ಆರ್ಥಿಕ ಅಪರಾಧಗಳಡಿನನ್ನ ವಿರುದ್ಧ ಸಿಬಿಐ ದಾಖಲಿಸಿರುವ ಪ್ರಕರಣ ರದ್ದುಗೊಳಿಸಬೇಕು’ ಎಂದು ಕೋರಿ ಬಂಧನದಲ್ಲಿರುವ ತೆಲುಗುದೇಶಂ ಪಕ್ಷದ (ಟಿಡಿಪಿ) ವಿಧಾನ ಪರಿಷತ್ ಸದಸ್ಯವಕಟಿನಾರಾಯಣ ರೆಡ್ಡಿ ಅವರ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.

‘ನಗರದಲ್ಲಿನ ಸಿಬಿಐ ವಿಶೇಷ ನ್ಯಾಯಾಲಯದ ವಿಚಾರಣೆಗೆ ತಡೆ ನೀಡಬೇಕು ಮತ್ತು ಎಫ್‌ಐಆರ್‌ ರದ್ದುಗೊಳಿಸಬೇಕು’ ಎಂದು ಕೋರಿ ವಕಟಿ ನಾರಾಯಣ ರೆಡ್ಡಿ ಸಲ್ಲಿಸಿದ್ದ ಅರ್ಜಿಯ ಮೇಲಿನ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಕೆ.ನಟರಾಜನ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಇದೇ 19ರಂದು ಪ್ರಕಟಿಸಿದೆ.

‘ಪ್ರಕರಣ ರದ್ದುಗೊಳಿಸಲು ಯಾವುದೇ ಸಾಕ್ಷ್ಯ ಕಾಣುತ್ತಿಲ್ಲ. ಆದ್ದರಿಂದ ಆರೋಪಿಗಳು ವಿಚಾರಣೆ ಎದುರಿಸಬೇಕು’ ಎಂದು ನ್ಯಾಯಪೀಠ ವಿವರಿಸಿದೆ.

ಪ್ರಕರಣವೇನು?: ‘ವಕಟಿನಾರಾಯಣ ರೆಡ್ಡಿ ಹೈದರಾಬಾದ್‌ನಲ್ಲಿರುವ ವಿಎನ್‌ಆರ್‌ ಇನ್‌ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ ಕಂಪನಿಯ ವ್ಯವಸ್ಥಾಪಕ ನಿರ್ದೇಶಕರು. ಬೆಂಗಳೂರಿನ ಭಾರತೀಯ ಕೈಗಾರಿಕಾ ಹಣಕಾಸು ನಿಗಮದಿಂದ (ಐಎಫ್‌ಸಿಐ) 2014-15 ರಲ್ಲಿ ₹ 190 ಕೋಟಿ ಸಾಲ ಮಂಜೂರು ಮಾಡಿಸಿಕೊಂಡಿದ್ದರು. ಆದರೆ, ಇನ್ನೂ ಆ ಸಾಲ ಮರುಪಾವತಿ ಮಾಡಿಲ್ಲ. ಇದರಿಂದ ಬೊಕ್ಕಸಕ್ಕೆ ₹ 205 ಕೋಟಿ ವಂಚನೆ ಆಗಿದೆ’ ಎಂಬುದು ಸಿಬಿಐ ಆರೋಪ. ಸಿಬಿಐ ಪರ ಪಿ.ಪ್ರಸನ್ನಕುಮಾರ್ ವಾದ ಮಂಡಿಸಿದ್ದರು.

ಬಾಲಕ ಅಭಿವೃದ್ಧಿಪಡಿಸಿದ್ದ ಸಾಫ್ಟ್‌ವೇರ್‌ನಿಂದ ಇ–ಮೇಲ್
ಬೆಂಗಳೂರು:
ನಗರದ ಶಾಲೆಗಳಿಗೆ ಬಾಂಬ್ ಬೆದರಿಕೆ ಬಂದಿದ್ದ ಪ್ರಕರಣದ ತನಿಖೆ ಮುಂದುವರಿಸಿರುವ ಪೊಲೀಸರು, ತಮಿಳುನಾಡಿನ ಬಾಲಕನೊಬ್ಬ ಅಭಿವೃದ್ಧಿಪಡಿಸಿದ್ದ ಸಾಫ್ಟ್‌ವೇರ್‌ನಿಂದ ಇ–ಮೇಲ್ ಬಂದಿರುವ ಮಾಹಿತಿಯನ್ನು ಕಲೆಹಾಕಿದ್ದಾರೆ.

20ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ ಹಾಕಿ ಇ–ಮೇಲ್‌ ಸಂದೇಶಗಳು ಬಂದಿದ್ದವು. ಆಯಾ ಠಾಣೆ ವ್ಯಾಪ್ತಿಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ತನಿಖೆಗೆಂದು ಪೊಲೀಸರ ವಿಶೇಷ ತಂಡ ರಚಿಸಲಾಗಿದೆ. ‘ಇ–ಮೇಲ್ ಆಧರಿಸಿ ತನಿಖೆ ನಡೆಸಲಾಗುತ್ತಿದೆ. ತಮಿಳುನಾಡಿನ 17 ವರ್ಷದ ಬಾಲಕ ಅಭಿವೃದ್ಧಿಪಡಿಸಿದ್ದ ಹೊಸ ಸಾಫ್ಟ್‌ವೇರ್‌ನಿಂದ ಇ–ಮೇಲ್‌ಗಳು ಬಂದಿರುವುದು ಗೊತ್ತಾಗಿದೆ. ತಮಿಳುನಾಡಿಗೆ ಹೋಗಿರುವ ಕೆಲ ಪೊಲೀಸರು, ಮತ್ತಷ್ಟು ಮಾಹಿತಿ ಕಲೆಹಾಕುತ್ತಿದ್ದಾರೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಭೋಪಾಲ್‌ನ ಶಾಲೆಗಳಿಗೂ ಬೆದರಿಕೆ: ‘ಬೆಂಗಳೂರು ಅಷ್ಟೇ ಅಲ್ಲದೇ, ಭೋಪಾಲ್‌ನ ಕೆಲ ಶಾಲೆಗಳಿಗೂ ಬಾಂಬ್ ಬೆದರಿಕೆ ಸಂದೇಶಗಳು ಬಂದಿವೆ. ಎಲ್ಲ ಸಂದೇಶಗಳು ಪರಸ್ಪರ ಹೋಲಿಕೆಯಾಗುತ್ತಿದ್ದು, ಒಂದೇ ಕಡೆಯಿಂದ ಬಂದಿರುವುದು ಮೇಲ್ನೋಟಕ್ಕೆ ಗೊತ್ತಾಗುತ್ತಿದೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

‘ಬಾಲಕ, ತಾನು ಅಭಿವೃದ್ಧಿಪಡಿಸಿದ್ದ ಸಾಫ್ಟ್‌ವೇರ್ ಮಾರಿದ್ದು, ವಿದೇಶಿ ಪ್ರಜೆಯೊಬ್ಬರು ಖರೀದಿಸಿರುವುದಾಗಿ ಗೊತ್ತಾಗಿದೆ. ಅದೇ ಪ್ರಜೆ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನವಿದ್ದು, ಅವರ ಬಗ್ಗೆ ಮಾಹಿತಿ ಸಿಗಬೇಕಿದೆ’ ಎಂದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT