‘ಅವಘಡ ನಡೆಯದಂತೆ ಕಠಿಣ ಪರೀಕ್ಷೆ’
‘ಚಾಲನ ಪರೀಕ್ಷೆಗೆ ಸಂಬಂಧಿಸಿದಂತೆ ಆಕ್ಷೇಪ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಪರೀಕ್ಷೆ ಕಠಿಣವಾಗಿತ್ತು ಎಂದು ಕೆಲವರು ಆಕ್ಷೇಪ ಸಲ್ಲಿಸಿದ್ದರು. ಚಾಲನಾ ವೃತ್ತಿ ಆಗಿರುವುದರಿಂದ ಮುಂದೆ ಅವಘಡ ನಡೆಯದಂತೆ ನೋಡಿಕೊಳ್ಳುವುದು ಅಗತ್ಯ. ಅದಕ್ಕಾಗಿ ಪರೀಕ್ಷೆಯಲ್ಲಿ ಚಾಲನಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕಾಗುತ್ತದೆ. ಆದರೂ ದೊಡ್ಡ ಸಂಖ್ಯೆಯಲ್ಲಿ ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ’ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ‘ಪ್ರಜಾವಾಣಿ’ಗೆ ತಿಳಿಸಿದರು.