ಭಾನುವಾರ, ಆಗಸ್ಟ್ 14, 2022
28 °C

ಒಂದೇ ದಿನ 21 ಪೊಲೀಸರಿಗೆ ಕೊರೊನಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Covid19

ಬೆಂಗಳೂರು: ಶುಕ್ರವಾರ ಒಂದೇ ದಿನದಲ್ಲೇ ನಗರದ 21 ಪೊಲೀಸರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಇನ್ಫೆಂಟ್ರಿ ರಸ್ತೆಯಲ್ಲಿರುವ ಪೊಲೀಸ್ ಕಮಿಷನರ್ ಕಚೇರಿ ಸಿಬ್ಬಂದಿಯನ್ನು ಇತ್ತೀಚೆಗೆ ಸಾಮೂಹಿಕವಾಗಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪೈಕಿ ಕಚೇರಿಯ ಅಪರಾಧ ದಾಖಲಾತಿ ವಿಭಾಗ, ನಮ್ಮ 100, ಆಡಳಿತ ವಿಭಾಗದ 9 ಸಿಬ್ಬಂದಿ ವರದಿಗಳು ಪಾಸಿಟಿವ್ ಬಂದಿವೆ.

ಠಾಣೆ ಸಿಬ್ಬಂದಿಯಲ್ಲೂ ಕೊರೊನಾ; ಅನ್ನಪೂರ್ಣೇಶ್ವರಿ ನಗರ ಠಾಣೆ ಎಸ್ಐ ಸೇರಿ 7 ಸಿಬ್ಬಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಚನ್ನಮ್ಮನ ಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆ ಇಬ್ಬರು ಸಿಬ್ಬಂದಿ, ಮಲ್ಲೇಶ್ವರ, ನಂದಿನಿ ಲೇಔಟ್, ರಾಜಗೋಪಾಲನಗರ ಠಾಣೆಯ ತಲಾ ಒಬ್ಬ ಸಿಬ್ಬಂದಿಗೆ ಸೋಂಕು ತಗುಲಿದೆ‌. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು