ಶನಿವಾರ, ಜೂನ್ 19, 2021
26 °C

ಸೌರವಿದ್ಯುತ್‌ನಿಂದ ಆರ್ಥಿಕ ಉಳಿತಾಯ: ನಿಲೇಕಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಜರಾಜೇಶ್ವರಿನಗರ: ಉತ್ಪತ್ತಿ­ಯಾ­ಗುವ  ವಿದ್ಯುತ್‌ ಪ್ರಮಾಣದಲ್ಲಿ ಶೇ 25ರಷ್ಟು ಕೃಷಿ ಚಟುವಟಿಕೆಗಳಿಗೆ ಬಳಕೆ­ಯಾಗುತ್ತಿದ್ದು, ರೈತರು ಪಂಪ್‌­ಸೆಟ್‌ಗಳಿಗೆ ಸೌರವಿದ್ಯುತ್‌ ಚಾಲಿತ ಮೋಟಾರ್‌­ಗಳನ್ನು ಬಳಸಿ  ಆರ್ಥಿಕ ಸಂಪ­ನ್ಮೂಲ ಉಳಿಸಬೇಕು ಎಂದು ವಿಶಿಷ್ಟ ಗುರುತಿನ ಚೀಟಿ  ಪ್ರಾಧಿಕಾರದ ಅಧ್ಯಕ್ಷ ನಂದನ್‌ ನಿಲೇಕಣಿ ಮನವಿ ಮಾಡಿದರು.ಗ್ಲೋಬಲ್‌ ಆಕಾಡೆಮಿ ಆಫ್ ಟೆಕ್ನಾ­ಲಜಿ ನಗರದಲ್ಲಿ ಸೋಮವಾರ ಆಯೋ­ಜಿಸಿದ್ದ ಸೌರಶಕ್ತಿ ಸಂಶೋಧನೆ ಹಾಗೂ ಅಭಿ­ವೃದ್ಧಿ ಕೇಂದ್ರ ಉದ್ಘಾಟಿಸಿ ಮಾತನಾಡಿದರು.ಇಂಧನದ  ಸಮಸ್ಯೆ ಹೆಚ್ಚಾಗುತ್ತಿದ್ದು ಗ್ರಾಮೀಣ ಮತ್ತು ನಗರ ಪ್ರದೇಶದ ನಾಗರಿಕರು ಸೌರಶಕ್ತಿ ಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು ಎಂದು ಸಲಹೆ ನೀಡಿದರು.ಇಂಧನ ಸಚಿವ ಡಿ.ಕೆ.ಶಿವಕುಮಾರ್‌ ,ಹೊಸ ಪ್ರಯೋಗಗಳ ಮೂಲಕ ವಿಜ್ಞಾನಿಗಳು ಕೃತಕ ವಿದ್ಯುತ್‌ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕು ಎಂದು ತಿಳಿಸಿದರು.ದಕ್ಷಿಣ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ ಅಭ್ಯರ್ಥಿ ಯಾಗಿ ಕಣಕ್ಕೆ ಇಳಿಯುವುದು ಖಚಿತ ಎಂದು ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಅಧ್ಯಕ್ಷ ನಂದನ್‌ ನಿಲೇಕಣಿ ತಿಳಿಸಿದರು.

ಸಮಾರಂಭದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಎರಡು ದಿನಗಳಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ. ಬೆಂಗಳೂರು ದಕ್ಷಿಣ ಜನತೆ ಹೊಸ ಮುಖ ಹಾಗೂ ಅಭಿವೃದ್ಧಿಯ ಚಿಂತನೆಗಳಿಗೆ ಬೆಂಬಲ ನೀಡಲಿದ್ದಾರೆ ಎಂದು ವಿಶ್ವಾಸ  ವ್ಯಕ್ತಪಡಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.