ಮಂಗಳವಾರ, ಸೆಪ್ಟೆಂಬರ್ 28, 2021
21 °C

21 ಕೆ.ಜಿ ಗಾಂಜಾ: ಕುಮಾರಸ್ವಾಮಿ ಲೇಔಟ್ ಪೊಲೀಸರಿಂದ 13 ಮಂದಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಯಲಚೇನಹಳ್ಳಿ ಬಳಿಯ ವೈ.ವಿ.ಅಣ್ಣಯ್ಯ ರಸ್ತೆಯಲ್ಲಿರುವ ಪಾಳುಬಿದ್ದ ಕಟ್ಟಡದ ಮೇಲೆ ಕುಮಾರಸ್ವಾಮಿ ಲೇಔಟ್ ಪೊಲೀಸರು ದಾಳಿ ಮಾಡಿದ್ದು, 21 ಕೆ.ಜಿ 350 ಗ್ರಾಂ ಗಾಂಜಾವನ್ನು ಜಪ್ತಿ ಮಾಡಿದ್ದಾರೆ.

ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಅಪರಾಧ ಕೃತ್ಯ ಎಸಗಲು ಸಂಚು ರೂಪಿಸುತ್ತಿದ್ದ 13 ರೌಡಿಗಳನ್ನೂ ಪೊಲೀಸರು ಬಂಧಿಸಿದ್ದಾರೆ. ಅವರೆಲ್ಲರ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

‘ರೌಡಿ ಮಳಿಯಾಳಿ ಮಧು ಹಾಗೂ ಆತನ ಸಹಚರರು, ಗಾಂಜಾ ಮಾರಾಟ ಮಾಡಿ ಹಣ ಗಳಿಸುತ್ತಿದ್ದರು. ಅದರಿಂದ ಬಂದ ಹಣದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದರು. ಜೊತೆಗೆ, ಅಪರಾಧ ಕೃತ್ಯಕ್ಕೆ ಬೇಕಾದ ಸಿದ್ಧತೆಗಾಗಿ ಹಣ ಬಳಸುತ್ತಿದ್ದರು’ ಎಂದು ಪೊಲೀಸ್ ಮೂಲಗಳು ಹೇಳಿವೆ.

ಜೋಡಿ ಕೊಲೆ ಆರೋಪಿಗಳು: ‘ಯಲಚೇನಹಳ್ಳಿಯ ಮಲಿಯಾಳಿ ಮಧು, ಕೆ.ಬಿ. ಲಿಖಿನ್, ಎಂ. ಅಯ್ಯಪ್ಪ, ಕಾರಿಯಪ್ಪ, ಸಾಗರ್, ಸುಮಂತ್, ಕಿರಣ್‌ಕುಮಾರ್, ಮುನಿಕೃಷ್ಣ, ಶಿವಕುಮಾರ್, ಜಬಿವುಲ್ಲಾ, ಪ್ರಮೋದ್, ಮಂಜುನಾಥ್ ಹಾಗೂ ಸ್ಟಾಲಿನ್ ಬಂಧಿತರು. ಇವರೆಲ್ಲ 2019ರಲ್ಲಿ ಜೆ.ಪಿ.ನಗರದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಆರೋಪಿಗಳು. ದಕ್ಷಿಣ ವಿಭಾಗದ ವಿವಿಧ ಠಾಣೆಗಳ ರೌಡಿ ಪಟ್ಟಿಯಲ್ಲಿ ಇವರ ಹೆಸರಿದೆ’ ಎಂದು ಡಿಸಿಪಿ ಹರೀಶ್ ಪಾಂಡೆ ಹೇಳಿದರು.

‘ಎದುರಾಳಿ ಗ್ಯಾಂಗ್ ಮೇಲೆ ದಾಳಿ ಮಾಡಲು ಸಂಚು ರೂಪಿಸುತ್ತಿದ್ದ ರೌಡಿಗಳು, ಅದಕ್ಕಾಗಿ ಹಣ ಹೊಂದಿಸುತ್ತಿದ್ದರು. ಬಹುಬೇಗನೇ ಹಣ ಗಳಿಸಬೇಕೆಂದು ತಿಳಿದು ಗಾಂಜಾ ಮಾರಾಟ ಮಾಡಲಾರಂಭಿಸಿದ್ದರು’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು