ಭಾನುವಾರ, 23 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಟೆಲಿ ಮನಸ್: 24 ಗಂಟೆ ಸೇವೆ‌ಗೆ ಸಿದ್ಧತೆ

ಮಾನಸಿಕ ಸಮಸ್ಯೆಗಳಿಗೆ ಪರಿಹಾರ l ರಾಜ್ಯದ ವಿವಿಧೆಡೆಯಿಂದ ನಿತ್ಯ ಸುಮಾರು 40 ಕರೆ
Last Updated 19 ನವೆಂಬರ್ 2022, 20:41 IST
ಅಕ್ಷರ ಗಾತ್ರ

ಬೆಂಗಳೂರು:ಮನೋರೋಗಿಗಳ ಜತೆಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಲು ಪ್ರಾರಂಭಿಸಿರುವ ‘ಟೆಲಿ ಮನಸ್’ ಸಹಾಯವಾಣಿ ಸೇವೆಯನ್ನು 24X7ಗೆ ವಿಸ್ತರಿಸಲು ನಿಮ್ಹಾನ್ಸ್‌ ಸಂಸ್ಥೆ ಮುಂದಾಗಿದೆ.

ಸದ್ಯಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಈ ಸೇವೆ ಒದಗಿಸಲಾಗುತ್ತಿದೆ. ಈ ಯೋಜನೆಗೆ ಕಳೆದ ಅ.10ರಂದು ಚಾಲನೆ ಸಿಕ್ಕಿತ್ತು.ಈ ಯೋಜನೆಯಡಿ ತಜ್ಞರು ಮನೋರೋಗಿಗಳಿಗೆ ಅಗತ್ಯ ಮಾರ್ಗದರ್ಶನ ನೀಡುತ್ತಿದ್ದಾರೆ.

ರಾಜ್ಯದ ವಿವಿಧೆಡೆಯಿಂದ ಈ ಸಹಾಯವಾಣಿಗೆ ಕರೆ ಬರುತ್ತಿದ್ದು, ದಿನವೊಂದಕ್ಕೆ 40ರವರೆಗೂ ಕರೆ ಸ್ವೀಕರಿಸಲಾಗುತ್ತಿದೆ. ಸದ್ಯ ಸಹಾಯವಾಣಿಯು ಇಲ್ಲಿನ ನಿಮ್ಹಾನ್ಸ್ ಹಾಗೂ ಧಾರವಾಡದ ಡಿಮಾನ್ಸ್‌ ಆಸ್ಪತ್ರೆಯಲ್ಲಿ ಕಾರ್ಯಾಚರಣೆ ನಡೆಸುತ್ತಿದೆ.ಈ ಸೇವೆಯನ್ನು ವಿಸ್ತರಿಸಲು ಸಿಬ್ಬಂದಿಯನ್ನೂ ನೇಮಕ ಮಾಡಿಕೊಳ್ಳಲಾಗುತ್ತಿದೆ.

‘ಎಲ್ಲ ರೀತಿಯ ಮಾನಸಿಕ ಸಮಸ್ಯೆಗಳಿಗೆ ‘ಟೆಲಿ ಮನಸ್’ ಸಹಾಯವಾಣಿ ಮೂಲಕ ಸೇವೆ ಒದಗಿಸಲಾಗುತ್ತದೆ. ರಾಜ್ಯದ ಎಲ್ಲೆಡೆಯಿಂದ ದೂರವಾಣಿ ಕರೆಗಳು ಬರುತ್ತಿವೆ. ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿರುವ ಮಾನಸಿಕ ಸಮಸ್ಯೆಗಳಿಗೆ ಸಂಬಂಧಿಸಿ ಹೆಚ್ಚಿನ ಸಂಖ್ಯೆಯಲ್ಲಿ ಕರೆಗಳು ಬರುತ್ತಿವೆ. ಓದಿನಲ್ಲಿ ಹಿನ್ನಡೆ, ಅನಗತ್ಯವಾಗಿ ಭಯಕ್ಕೆ ಒಳಗಾಗುವುದು ಸೇರಿ ವಿವಿಧ ಸಮಸ್ಯೆಗಳ ಬಗ್ಗೆ ಹೆಚ್ಚಿನವರು ವಿಚಾರಿಸುತ್ತಿದ್ದಾರೆ’ ಎಂದು ಸಂಸ್ಥೆಯ ಮನೋರೋಗ ತಜ್ಞೆ ಡಾ.ಪಿ. ರಜನಿ ತಿಳಿಸಿದರು.

‘ಸಹಾಯವಾಣಿಗೆ 40 ಸಿಬ್ಬಂದಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿರುವವರು ಸಹಾಯವಾಣಿಗೆ ಸಂಪರ್ಕಿಸಿ, ತಜ್ಞರಿಂದ ಅಗತ್ಯ ಸಲಹೆಗಳನ್ನು ಪಡೆದುಕೊಳ್ಳಬೇಕು. ಕೋವಿಡ್ ಪೀಡಿತರಾದವರಿಗೆ ನಮ್ಮ ಸಿಬ್ಬಂದಿಯೇ ದೂರವಾಣಿ ಕರೆ ಮಾಡಿ, ಅಗತ್ಯ ಸಲಹೆ ಸೂಚನೆಯನ್ನು ನೀಡುತ್ತಿದ್ದಾರೆ’ ಎಂದು ಹೇಳಿದರು.

ಟೆಲಿ ಮನಸ್ ಸಹಾಯವಾಣಿ ಸಂಖ್ಯೆ: 18008914416

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT