ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 25 ಲಕ್ಷ ಕರಡು ಇ-ಖಾತಾಗಳು ಆನ್ಲೈನ್ನಲ್ಲಿ ಲಭ್ಯವಿದ್ದು, 2,71 ಲಕ್ಷ ಅಂತಿಮ ಇ–ಖಾತಾಗಳನ್ನು ವಿತರಿಸಲಾಗಿದೆ ಎಂದು ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ತಿಳಿಸಿದರು.

ಅಂತಿಮ ಇ-ಖಾತಾಗಳಿಗಾಗಿ ನಾಗರಿಕರು 2.87 ಲಕ್ಷ ಅರ್ಜಿ ಸಲ್ಲಿಸಿದ್ದಾರೆ. ಸರಾಸರಿ ಎರಡು ದಿನದಲ್ಲಿ ಅಂತಿಮ ಇ–ಖಾತಾ ನೀಡಲಾಗುತ್ತಿದೆ. ಇ-ಖಾತಾ ಅರ್ಜಿಗಳ ದೈನಂದಿನ ವಿಲೇವಾರಿಯು, ದಿನನಿತ್ಯದ ಸ್ವೀಕೃತಿಗಿಂತ ಹೆಚ್ಚಾಗಿದೆ ಎಂದರು.

ನಾಗರಿಕರು https://BBMPeAasthi.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಪಾಲಿಕೆ ಕಚೇರಿಗಳಿಗೆ ಭೇಟಿ ನೀಡುವ ಅಗತ್ಯವಿಲ್ಲ. ಪಾಲಿಕೆ ಸಹಾಯಕ ಕಂದಾಯ ಅಧಿಕಾರಿಗಳು ಇ-ಖಾತಾಗಾಗಿ ಸಲ್ಲಿಸಿದ ಅರ್ಜಿಗಳನ್ನು ಪರಿಶೀಲಿಸಿ, ಅಂತಿಮ ಇ-ಖಾತಾ ಸಿಗುವ ವ್ಯವಸ್ಥೆ ಮಾಡಲಿದ್ದಾರೆ ಎಂದು ತಿಳಿಸಿದರು.

ಇ-ಖಾತಾ ಅರ್ಜಿಗಳ ವಿಲೇವಾರಿಗೆ ಸಂಬಂಧಿಸಿದಂತೆ ಎಂಟು ವಲಯಗಳು ಮತ್ತು ಎಲ್ಲ 64 ಸಹಾಯಕ ಕಂದಾಯ ಅಧಿಕಾರಿಗಳ ಜೊತೆ ಪ್ರತಿನಿತ್ಯ ವರ್ಚ್ಯುವಲ್ ಮೂಲಕ ಸಭೆ ನಡೆಸಿ, ಅರ್ಜಿಗಳ ವಿಲೇವಾರಿ ಕುರಿತು ಪರಿಶೀಲಿಸಲಾಗುವುದು. ಜೊತೆಗೆ ಅಗತ್ಯ ನಿರ್ದೇಶನಗಳನ್ನು ನೀಡಲಾಗುವುದು ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.