ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

₹22 ಲಕ್ಷ ಮೌಲ್ಯದ 29 ಬೈಕ್‌ ಜಪ್ತಿ

Published 10 ಏಪ್ರಿಲ್ 2024, 15:23 IST
Last Updated 10 ಏಪ್ರಿಲ್ 2024, 15:23 IST
ಅಕ್ಷರ ಗಾತ್ರ

ಬೆಂಗಳೂರು: ಅಮೃತಹಳ್ಳಿ ಹಾಗೂ ವಿದ್ಯಾರಣ್ಯಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ರಸ್ತೆಗಳ ಬದಿ ಹಾಗೂ ಮನೆಗಳ ಎದುರು ನಿಲ್ಲಿಸಿದ್ದ ಬೈಕ್‌ಗಳನ್ನು ಕಳವು ಮಾಡುತ್ತಿದ್ದ ನಾಲ್ವರು ಬಾಲಕರು ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ ₹22 ಲಕ್ಷ ಮೌಲ್ಯದ 29 ಬೈಕ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ.

ಮದನ್‌ ಸೇರಿದಂತೆ ಇಬ್ಬರು ಬಾಲಕರನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದು, 15 ಪ್ರಕರಣಗಳನ್ನು ಪತ್ತೆಹಚ್ಚಿದ್ದಾರೆ.

‘ಬೈಕ್‌ಗಳ ಕಳವು ಪ್ರಕರಣದ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಮೂವರು ಆರೋಪಿಗಳ ಬಂಧನದಿಂದ ವಿದ್ಯಾರಣ್ಯಪುರ 1, ಕೊಡಿಗೇಹಳ್ಳಿ 2, ಯಲಹಂಕ ನ್ಯೂಟೌನ್‌, ವಿಜಯನಗರ, ಯಶವಂತಪುರ, ಬಸವೇಶ್ವರನಗರ, ಚಂದ್ರಾಲೇಔಟ್‌ ಪೊಲೀಸ್ ಠಾಣೆಗಳಲ್ಲಿ ತಲಾ ಒಂದು, ಬಾಗಲಗುಂಟೆ 4, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅವಲಹಳ್ಳಿ, ನೆಲಮಂಗಲ ಗ್ರಾಮಾಂತರ, ದೊಡ್ಡಬಳ್ಳಾಪುರ ಪೊಲೀಸ್‌ ಠಾಣೆಯಲ್ಲಿ ತಲಾ ಒಂದು ಸೇರಿದಂತೆ ಒಟ್ಟು 15 ಪ್ರಕರಣಗಳು ಪತ್ತೆಯಾಗಿವೆ. ಸುಮಾರು ₹12 ಲಕ್ಷ ಮೌಲ್ಯದ 15 ಬೈಕ್‌ಗಳನ್ನು ಜಪ್ತಿ ಮಾಡಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.

ಅಮೃತಹಳ್ಳಿ ಪೊಲೀಸರ ತಂಡ, ಎರಡು ಪ್ರಕರಣಗಳಲ್ಲಿ ಇಬ್ಬರು ಬಾಲಕರನ್ನು ಬಂಧಿಸಿದೆ. ಪೀಣ್ಯ, ಕೂಡಿಗೆಹಳ್ಳಿ, ಅಮೃತಹಳ್ಳಿ ವ್ಯಾಪ್ತಿಯಲ್ಲಿ ಕಳವು ನಡೆಸಿದ್ದ ₹10 ಲಕ್ಷ ಮೌಲ್ಯದ 14 ಬೈಕ್‌ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT