ಮಂಗಳವಾರ, 8 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

₹30 ಲಕ್ಷ ಲಂಚ, ಬೆದರಿಕೆ ಆರೋಪ: BJP ಶಾಸಕ ಮುನಿರತ್ನ ವಿರುದ್ಧ ಎರಡು ಎಫ್ಐಆರ್

Published : 14 ಸೆಪ್ಟೆಂಬರ್ 2024, 4:59 IST
Last Updated : 14 ಸೆಪ್ಟೆಂಬರ್ 2024, 4:59 IST
ಫಾಲೋ ಮಾಡಿ
Comments

ಬೆಂಗಳೂರು: ಘನತ್ಯಾಜ್ಯ ವಿಲೇವಾರಿ ಗುತ್ತಿಗೆ ನೀಡಲು ₹30 ಲಕ್ಷಕ್ಕೆ ಬೇಡಿಕೆ ಇಟ್ಟು ಬೆದರಿಕೆ ಹಾಕಿದ್ದಾರೆ ಎಂಬ ಆರೋಪದ ಅಡಿ ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಸೇರಿದಂತೆ ನಾಲ್ವರ ವಿರುದ್ಧ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

ಬಿಬಿಎಂಪಿ ಗುತ್ತಿಗೆದಾರ ಚೆಲುವರಾಜ್ ನೀಡಿದ ದೂರು ಆಧರಿಸಿ ಮುನಿರತ್ನ, ಸರ್ಕಾರಿ ಅಧಿಕಾರಿ ವಿಜಯ್‌ಕುಮಾರ್, ಕಾರ್ಯದರ್ಶಿ ಅಭಿಷೇಕ್ ಹಾಗೂ ಶಾಸಕರ ಆಪ್ತ ವಸಂತಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾತಿ ನಿಂದನೆ ಆರೋಪದ ಅಡಿ ಇದೇ ಠಾಣೆಯಲ್ಲಿ ಶಾಸಕರ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ವೇಲುನಾಯಕ್ ಎಂಬುವವರು ನೀಡಿದ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲು‌‌‌ ಮಾಡಿಕೊಂಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT