ಗುರುವಾರ, 13 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ | ಏಳು ಸ್ಥಾನಗಳಿಗೆ 300 ಆಕಾಂಕ್ಷಿಗಳಿದ್ದಾರೆ: ಡಿಕೆಶಿ

Published 28 ಮೇ 2024, 16:10 IST
Last Updated 28 ಮೇ 2024, 16:10 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ದೊರಕುವ ಏಳು ಸ್ಥಾನಗಳಿಗೆ 300 ಆಕಾಂಕ್ಷಿಗಳಿದ್ದಾರೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದರು.

ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚಿಸಲು ಮಂಗಳವಾರ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘300ಕ್ಕೂ ಹೆಚ್ಚು ಆಕಾಂಕ್ಷಿಗಳಿದ್ದಾರೆ. ಎಲ್ಲ ವರ್ಗದವರೂ ಅವಕಾಶಕ್ಕಾಗಿ ಪ್ರಯತ್ನಿಸುತ್ತಿದ್ದಾರೆ. ಬ್ಲಾಕ್‌, ಜಿಲ್ಲೆ, ರಾಜ್ಯ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಶ್ರಮಿಸಿದವರು ಅವಕಾಶ ಕೇಳುತ್ತಿದ್ದಾರೆ’ ಎಂದರು.

‘ಕೆಲವು ಸ್ಥಾನಗಳಲ್ಲಿ ಹಾಲಿ ಸದಸ್ಯರೇ ಪ್ರಯತ್ನ ಮುಂದುವರಿಸಿದ್ದಾರೆ. ಪ್ರಾದೇಶಿಕತೆ, ಸಮುದಾಯ, ಪಕ್ಷಕ್ಕೆ ದುಡಿಮೆ ಆಧರಿಸಿ ಸ್ಥಾನ ನೀಡಬೇಕಿದೆ. ಬೇಡಿಕೆ ಹೆಚ್ಚಿರುವುದರಿಂದ ಅಭ್ಯರ್ಥಿಗಳ ಆಯ್ಕೆ ಕಷ್ಟಕರವಾಗಿದೆ. ಹೈಕಮಾಂಡ್‌ ನಿರ್ಧಾರ ಕೈಗೊಳ್ಳಲಿದೆ’ ಎಂದು ಹೇಳಿದರು.

‘ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಇಬ್ಬರೇ ಅಭ್ಯರ್ಥಿ ಆಯ್ಕೆ ಕುರಿತು ನಿರ್ಧರಿಸಬಾರದು’ ಎಂಬ ಗೃಹ ಸಚಿವ ಜಿ. ಪರಮೇಶ್ವರ ಆಕ್ಷೇಪ ಕುರಿತು ಕೇಳಿದಾಗ, ‘ಖಂಡಿತವಾಗಿ ನಾವು ಅಭಿಪ್ರಾಯವನ್ನೂ ಕೇಳುತ್ತೇವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT