ಬೆಂಗಳೂರು: ನಗರದ ಸರ್ಕಾರಿ ಎಚ್.ಎಸ್.ಐ.ಎಸ್. ಘೋಷಾ ಆಸ್ಪತ್ರೆಯ ವೈದ್ಯರು 78 ದಿನಗಳಲ್ಲಿ ಕೊರೊನಾ ಸೋಂಕಿತ 300 ಗರ್ಭಿಣಿಯರಿಗೆ ಯಶಸ್ವಿ ಯಾಗಿ ಹೆರಿಗೆಗಳನ್ನು ಮಾಡಿಸಿದ್ದಾರೆ.

ಕೆಲ ದಿನಗಳಿಂದ ಕೋವಿಡ್ ಪೀಡಿತ ಗರ್ಭಿಣಿಯರಿಗೆ ಚಿಕಿತ್ಸೆ ಒದಗಿಸುತ್ತಿರುವ ಅಲ್ಲಿನ ವೈದ್ಯರು, ಶನಿವಾರ 300ನೇ ಹೆರಿಗೆಯನ್ನು ಮಾಡಿಸಿದ್ದಾರೆ. ಇದರೊಂದಿಗೆ ವೈದ್ಯರು ಹಾಗೂ ಶುಶ್ರೂಷಕರು ಸಂಭ್ರಮಿಸಿದ್ದು, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ
ಡಾ.ಕೆ. ಸುಧಾಕರ್ ಅವರು ಈ ಕಾರ್ಯಕ್ಕೆ ಶುಭಹಾರೈಸಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಈ ಆಸ್ಪತ್ರೆಯಲ್ಲಿ ಮಾರ್ಚ್ 27ರಿಂದ ಕೋವಿಡ್ ಪೀಡಿತ ಗರ್ಭಿಣಿಯರಿಗೆ ಸೇವೆ ಪ್ರಾರಂಭಿಸ
ಲಾಗಿದೆ. ಅಲ್ಲಿ 70 ಹಾಸಿಗೆಗಳಿದ್ದು, ತಜ್ಞ ವೈದ್ಯರ ಜತೆಗೆ ವೈದ್ಯಕೀಯ ವಿದ್ಯಾರ್ಥಿಗಳು ಕೂಡ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನ ಆಸ್ಪತ್ರೆಗಳ ಜತೆಗೆ ಸುತ್ತಮುತ್ತಲಿನ ಜಿಲ್ಲೆಗಳ ಆಸ್ಪತ್ರೆಗಳಿಂದ ಕೂಡ ಕೋವಿಡ್ ಪೀಡಿತ ಗರ್ಭಿಣಿಯರನ್ನು ಶಿಫಾರಸು ಆಧಾರದಲ್ಲಿ ಇಲ್ಲಿಗೆ ಕಳುಹಿಸಲಾಗುತ್ತಿದೆ.

28 ಗರ್ಭಿಣಿಯರು ಸಾವು: ಈವರೆಗೆ ಆಸ್ಪತ್ರೆಗೆ ದಾಖಲಾದ ಕೋವಿಡ್ ಪೀಡಿತ ಗರ್ಭಿಣಿಯರಲ್ಲಿ 28 ಮಂದಿ ಚಿಕಿತ್ಸೆಗೆ ಸ್ಪಂದಿಸದೆಯೇ ಮೃತಪಟ್ಟಿ ದ್ದಾರೆ. ಇವರಲ್ಲಿ ಬಹುತೇಕರು ಉಸಿರಾಟದ ಸಮಸ್ಯೆ ಸೇರಿದಂತೆ ವಿವಿಧ ಕಾಯಿಲೆಗಳನ್ನು ಕೂಡ ಎದುರಿಸಿದವರಾಗಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.

‘ಅನಾರೋಗ್ಯ ಸಮಸ್ಯೆ ಕಾಣಿಸಿಕೊಂಡಾಗ ಕೆಲವರು ಸ್ವಯಂ ಚಿಕಿತ್ಸೆ ಮಾಡಿಕೊಂಡು ಮನೆಯಲ್ಲಿಯೇ ಇರುತ್ತಾರೆ. ತಡವಾಗಿ ಆಸ್ಪತ್ರೆಗೆ ಬಂದ ಕಾರಣ ಕೆಲವರು ಮೃತಪಟ್ಟಿ
ದ್ದಾರೆ. ಅವರಿಗೆ ನ್ಯುಮೋನಿಯಾ, ಶ್ವಾಸ ಕೋಶದ ಸೋಂಕು ಕೂಡ ಜೀವಕ್ಕೆ ಅಪಾಯ ತಂದೊಡ್ಡಿತು. ಉಸಿರಾಟದ ಸಮಸ್ಯೆ ಸೇರಿದಂತೆ ವಿವಿಧ ಅನಾರೋಗ್ಯ ಸಮಸ್ಯೆಗಳು ಕಾಣಿಸಿಕೊಂಡ ಕೂಡಲೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೋವಿಡ್ ಪ್ರಕರಣಗಳು ಇಳಿಕೆಯಾದರೂ ಗರ್ಭಿಣಿ ಯರು ಅನಗತ್ಯವಾಗಿ ಹೊರಗಡೆ ಓಡಾಟ ನಡೆಸಬಾರದು’ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ತುಳಸಿದೇವಿ ‘ಪ್ರಜಾವಾಣಿ’ಗೆ ತಿಳಿಸಿದರು.

‘ಕೋವಿಡ್ ಕಾಯಿಲೆ ದೂರವಾಗುವವರೆಗೂ ಸಮಾರಂಭಗಳು ಸೇರಿದಂತೆ ಹೆಚ್ಚು ಜನ ಸೇರುವ ಕಡೆ ಗರ್ಭಿಣಿಯರು ಹೋಗಬಾರದು. ಮನೆಯಲ್ಲಿ ಯಾರಾ ದರೂ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದರೆ ಸ್ವಯಂ ನಿಗಾ ವ್ಯವಸ್ಥೆಗೆ ಒಳಪಡಬೇಕಾಗುತ್ತದೆ’ ಎಂದರು.

141 ಗರ್ಭಿಣಿಯರಿಗೆ ಸಹಜ ಹೆರಿಗೆ

ಆಸ್ಪತ್ರೆಯಲ್ಲಿ ಈವರೆಗೆ ಕೋವಿಡ್ ಪೀಡಿತ 554 ಗರ್ಭಿಣಿಯರು ದಾಖಲಾಗಿ ದ್ದಾರೆ. ಸದ್ಯ 15 ಮಂದಿ ಕೋವಿಡ್ ಪೀಡಿತ ಗರ್ಭಿಣಿಯರು ಚಿಕಿತ್ಸೆ ಪಡೆದು ಕೊಳ್ಳುತ್ತಿದ್ದಾರೆ. ಯಶಸ್ವಿ 300 ಹೆರಿಗೆಗಳಲ್ಲಿ 159 ಮಂದಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. 141 ಮಂದಿಗೆ ಸಹಜ ಹೆರಿಗೆ ಮಾಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.