ಬೆಂಗಳೂರು: ರಸ್ತೆಬದಿ ಹಾಗೂ ಮನೆಯ ಎದುರು ಸಾರ್ವಜನಿಕರು ನಿಲುಗಡೆ ಮಾಡುತ್ತಿದ್ದ ದ್ವಿಚಕ್ರ ವಾಹನಗಳನ್ನು ನಕಲಿ ಕೀ ಬಳಸಿ ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ಎಚ್ಎಎಲ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ತಾಲ್ಲೂಕಿನ ಇಸ್ಕೋನಾಥಪಲ್ಲಿ ನಿವಾಸಿ ಪಿ.ಹೇಮಂತ್ಕುಮಾರ್ (23) ಬಂಧಿತ ಆರೋಪಿ.

ಆರೋಪಿಯಿಂದ ₹40 ಲಕ್ಷ ಮೌಲ್ಯದ 32 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಠಾಣಾ ವ್ಯಾಪ್ತಿಯ ವಿಭೂತಿಪುರದಲ್ಲಿ ನೆಲಸಿರುವ ವ್ಯಕ್ತಿ ನೀಡಿದ್ದ ದೂರು ಆಧರಿಸಿ ಆರೋಪಿಯನ್ನು ಬಂಧಿಸಲಾಗಿದೆ. ದೂರುದಾರ ಫೆಬ್ರುವರಿ 2ರಂದು ಮನೆಯ ಎದುರು ದ್ವಿಚಕ್ರ ವಾಹನವನ್ನು ನಿಲುಗಡೆ ಮಾಡಿದ್ದರು. ಮರು ದಿನ ಬೆಳಿಗ್ಗೆ ನೋಡಿದಾಗ ಆ ಸ್ಥಳದಲ್ಲಿ ವಾಹನ ಇರಲಿಲ್ಲ. ಅವರು ಎಚ್ಎಎಲ್ ಠಾಣೆಗೆ ದೂರು ನೀಡಿದ್ದರು ಎಂದು ಮೂಲಗಳು ತಿಳಿಸಿವೆ.

ಖಚಿತ ಸುಳಿವು ಆಧರಿಸಿ ಮದನಪಲ್ಲಿಯಲ್ಲಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಯಿತು. ಆತನನ್ನು ವಿಚಾರಣೆಗೆ ಒಳಪಡಿಸಿದಾಗ ದ್ವಿಚಕ್ರ ವಾಹನ ಕಳ್ಳತನ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು.

‘ಆಂಧ್ರಪ್ರದೇಶದಿಂದ ಬಸ್ನಲ್ಲಿ ನಗರಕ್ಕೆ ಬರುತ್ತಿದ್ದ ಆರೋಪಿ, ನಕಲಿ ಕೀಗಳನ್ನು ಬಳಸಿ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ. ಕದ್ದ ವಾಹನಗಳನ್ನು ಮದನಪಲ್ಲಿಗೆ ಕೊಂಡೊಯ್ದು, ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ. ಸ್ನೇಹಿತನಿಗೆ ಮಾರಾಟ ಮಾಡಿದ್ದ 20 ದ್ವಿಚಕ್ರ ವಾಹನ ಹಾಗೂ ಮದನಪಲ್ಲಿಯ ಖಾಲಿ ಪ್ರದೇಶದಲ್ಲಿ ನಿಲುಗಡೆ ಮಾಡಿದ್ದ 12 ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ಹೇಳಿದರು.

ಆರೋಪಿಯ ಬಂಧನದಿಂದ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಏಳು, ಆವಲಹಳ್ಳಿಯಲ್ಲಿ ಐದು, ಎಚ್ಎಎಲ್ನಲ್ಲಿ ಎರಡು, ಹೊಸಕೋಟೆ ಹಾಗೂ ವಿಜಯಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ತಲಾ ಒಂದು ಪ್ರಕರಣ ಪತ್ತೆಯಾಗಿವೆ. ಆರೋಪಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಲಾಯಿತು. ಆರೋಪಿಯನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.