ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಒಂದೇ ದಿನ 3,242 ಪೊಲೀಸರ ವರ್ಗಾವಣೆ!

Last Updated 3 ಜುಲೈ 2022, 2:36 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಪೊಲೀಸರ ವರ್ಗಾವಣೆ ನಿಯಮಗಳಿಗೆ ಇತ್ತೀಚೆಗಷ್ಟೇ ಕೆಲ ತಿದ್ದುಪಡಿ ಮಾಡಲಾಗಿದ್ದು, ಇದರ ಬೆನ್ನಲ್ಲೇ ಒಂದೇ ದಿನದಲ್ಲಿ 3,242 ಪೊಲೀಸರನ್ನು ವರ್ಗಾವಣೆ ಮಾಡಲಾಗಿದೆ.

ಒಂದು ಸ್ಥಳದಲ್ಲಿ ಕೆಲಸ ಮಾಡುವ ಪೊಲೀಸರ ಕನಿಷ್ಠ ಸೇವಾವಧಿಯನ್ನು 6 ವರ್ಷದಿಂದ 5 ವರ್ಷಕ್ಕೆ ಇಳಿಸಲಾಗಿತ್ತು. ಈ ತಿದ್ದುಪಡಿ ಅನ್ವಯ ಪಟ್ಟಿ ಸಿದ್ಧಪಡಿಸಿದ್ದ ಆಡಳಿತ ವಿಭಾಗ, ಕಾನ್‌ಸ್ಟೆಬಲ್‌ನಿಂದ ಹಿಡಿದು ಪಿಎಸ್‌ಐ ಹುದ್ದೆಯಲ್ಲಿದ್ದವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

‘ಹಲವರು ಒಂದೇ ಠಾಣೆ ಹಾಗೂ ಒಂದೇ ಜಾಗದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇದು ಅಕ್ರಮಗಳಿಗೆ ಎಡೆಮಾಡಿಕೊಟ್ಟಿದ್ದ ಬಗ್ಗೆ ದೂರುಗಳು ಬಂದಿದ್ದವು. ಹೀಗಾಗಿ, ವರ್ಗಾವಣೆ ನಿಯಮ ತಿದ್ದುಪಡಿ ಮಾಡಿ ಹಲವರನ್ನು ವರ್ಗಾವಣೆ ಮಾಡಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು.

‘ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ. ತ್ವರಿತವಾಗಿ ಹೊಸ ಜಾಗದಲ್ಲಿ ಕೆಲಸಕ್ಕೆ ಹಾಜರಾಗುವಂತೆ ಆದೇಶದಲ್ಲಿ ತಿಳಿಸಲಾಗಿದೆ. 1,749 ಕಾನ್‌ಸ್ಟೆಬಲ್, 1,292 ಹೆಡ್ ಕಾನ್‌ಸ್ಟೆಬಲ್, 43 ಎಎಸ್ಐ ಹಾಗೂ 163 ಪಿಎಸ್ಐಗಳು ಪಟ್ಟಿಯಲ್ಲಿದ್ದಾರೆ’ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT