ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

371-ಜೆ ಮೀಸಲಾತಿಯಿಂದ ಅನ್ಯಾಯ: ಪ್ರತಿಭಟನೆ

ಬಿಡಿಎ, ಬಿಬಿಎಂಪಿಗಳಲ್ಲೂ ಕಲ್ಯಾಣ ಕರ್ನಾಟಕ ಕೋಟಾ ನಿಗದಿ ಎಂದು ಆಕ್ಷೇಪ
Published 1 ಜೂನ್ 2024, 16:00 IST
Last Updated 1 ಜೂನ್ 2024, 16:00 IST
ಅಕ್ಷರ ಗಾತ್ರ

ಬೆಂಗಳೂರು: 371–ಜೆ ಮೀಸಲಾತಿಯನ್ನು ರಾಜ್ಯದ ಎಲ್ಲ ಭಾಗಗಳ ಹುದ್ದೆಗಳ ಭರ್ತಿಗೆ ಅನ್ವಯಿಸುವುದರಿಂದ ಕರ್ನಾಟಕದ ಇತರೆ ಪ್ರದೇಶಗಳಿಗೆ ಅನ್ಯಾಯವಾಗುತ್ತಿದೆ ಎಂದು ಹಸಿರು ಪ್ರತಿಷ್ಠಾನದ ಸದಸ್ಯರು ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಪ್ರತಿಭಟಿಸಿದರು.

‘ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ ಖಾಲಿ ಹುದ್ದೆಗಳ ಭರ್ತಿಗೆ ಆದ್ಯತೆ ನೀಡಿದಂತೆ ಇತರ ಜಿಲ್ಲೆಗಳಲ್ಲಿಯೂ ಖಾಲಿ ಹುದ್ದೆಗಳ ಭರ್ತಿಗೆ ಕ್ರಮಕೈಗೊಳ್ಳುತ್ತಿಲ್ಲ. ಇದರಿಂದ ಎಲ್ಲ ಕಡೆ ಕಲ್ಯಾಣ ಕರ್ನಾಟಕದ ನೌಕರರೇ ಹೆಚ್ಚಾಗುತ್ತಿದ್ದಾರೆ’ ಎಂದು ದೂರಿದರು.

‘ಬಡ್ತಿಯನ್ನು ನೀಡುವಾಗ ಜ್ಯೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಮಾಡುವ ಬದಲು ಒಂದೇ ಮಾಡುತ್ತಿರುವುದರಿಂದ ಕರ್ನಾಟಕದ ಇತರ ಭಾಗದ ಜಿಲ್ಲೆಗಳಲ್ಲಿರುವ ನೌಕರರಿಗೆ ಅನ್ಯಾಯವಾಗುತ್ತಿದೆ’ ಎಂದೂ ಪ್ರತಿಭಟನಾಕಾರರು ದೂರಿದರು.

‘371–ಜೆ ತಿದ್ದುಪಡಿಯ ಸೌಲಭ್ಯಕ್ಕೆ ಸಹಮತ ನೀಡಿದ ನೌಕರರನ್ನು ಮಾತ್ರ ಕಲ್ಯಾಣ ಕರ್ನಾಟಕ ಕೋಟಾದಲ್ಲಿ ಪರಿಗಣಿಸಲಾಗಿದೆ. ಅಭಿಮತ ನೀಡದ ಆ ಭಾಗದ ನೌಕರರನ್ನು ಕರ್ನಾಟಕದ ಕೋಟಾಗೆ ಸೇರಿಸಲಾಗಿದೆ. ಇದರಿಂದ ಉಳಿದ 24 ಜಿಲ್ಲೆಗಳ ಆಕಾಂಕ್ಷಿಗಳಿಗೆ ಅನ್ಯಾಯವಾಗಿದೆ. ರಾಜ್ಯಮಟ್ಟದ ವ್ಯಾಪ್ತಿಯಲ್ಲಿ ಬಾರದ ಬಿಡಿಎ, ಬಿಬಿಎಂಪಿಯಂಥ ಕಚೇರಿಗಳಲ್ಲಿಯೂ ಕಲ್ಯಾಣ ಕರ್ನಾಟಕ ಕೋಟಾ ನಿಗದಿ ಮಾಡಲಾಗಿದೆ’ ಎಂದು ಆರೋಪಿಸಿದರು.

ಕಲ್ಯಾಣ ಕರ್ನಾಟಕಕ್ಕೆ ಸಂಬಂಧಿಸಿದ ಖಾಲಿ ಹುದ್ದೆಗಳನ್ನು ತುಂಬಲು ಆದ್ಯತೆ ನೀಡಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿಯೂ ಖಾಲಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಎಲ್ಲ ಕಡೆ ಕಲ್ಯಾಣ ಕರ್ನಾಟಕದ ನೌಕರರೇ ಹೆಚ್ಚಾಗುತ್ತಿದ್ದಾರೆ. ಬಡ್ತಿ ನೀಡುವಾಗ ಜ್ಯೇಷ್ಠತಾ ಪಟ್ಟಿಯನ್ನು ಪ್ರತ್ಯೇಕವಾಗಿ ಮಾಡುವ ಬದಲು ಒಂದೇ ಮಾಡುತ್ತಿರುವುದರಿಂದ ಕರ್ನಾಟಕದ ಇತರ ಭಾಗದ ನೌಕರರಿಗೆ ಅನ್ಯಾಯವಾಗುತ್ತಿದೆ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಷ್ಠಾನದ ಅಧ್ಯಕ್ಷ ಕೆ.ಜಿ. ಕುಮಾರ್, ಸದಸ್ಯರಾದ ಎಚ್.ಎನ್. ಮಂಜುನಾಥ್, ವೇಣುಗೋಪಾಲ್, ಅರ್ಜುನ, ಸುಭಾಷ್ ಸಿ., ಭಾಗವಹಿಸಿದ್ದರು.

Highlights - 371–ಜೆ ಮೀಸಲಾತಿ ಎಲ್ಲ ಜಿಲ್ಲೆಗಳಿಗೂ ಅನ್ವಯ ಬೇಡ ಏಕರೂಪವಾಗಿ ಅನ್ವಯಿಸಿದರೆ 24 ಜಿಲ್ಲೆಗಳವರಿಗೆ ಅನ್ಯಾಯ ಕಲ್ಯಾಣ ಕರ್ನಾಟಕದಂತೆ ಎಲ್ಲ ಜಿಲ್ಲೆಗಳಲ್ಲಿ ನೇಮಕಾತಿಗೆ ಆದ್ಯತೆಗೆ ಆಗ್ರಹ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT