ಸೋಮವಾರ, 3 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 40ರಷ್ಟು ಕಮಿಷನ್ ಆರೋಪ: ಗುತ್ತಿಗೆದಾರರ ಸಂಘದ ಅಧ್ಯಕ್ಷ ಬಂಧನ

Last Updated 24 ಡಿಸೆಂಬರ್ 2022, 22:00 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಖ್ಯಮಂತ್ರಿ ಹಾಗೂ ಎಲ್ಲ ಸಚಿವರು ಶೇ 40ರಷ್ಟು ಕಮಿಷನ್ ಪಡೆಯುತ್ತಾರೆ’ ಎಂಬುದಾಗಿ ಆರೋಪಿಸಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಸೇರಿ ಹಲವರನ್ನು ಕೇಂದ್ರ ವಿಭಾಗದ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲು ಪ್ರಕ್ರಿಯೆ ಆರಂಭಿಸಿದ್ದಾರೆ.

‘ಕೆಂಪಣ್ಣ ಹಾಗೂ ಇತರೆ 18 ಮಂದಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಮಾನಹಾನಿ ಮಾಡಿದ್ದಾರೆ’ ಎಂಬುದಾಗಿ ತೋಟಗಾರಿಕೆ ಸಚಿವ ಮುನಿರತ್ನ ಅವರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ಕೆಂಪಣ್ಣ ಸೇರಿ 19 ಮಂದಿಗೆ ವಿಚಾರಣೆಗೆ ಬರುವಂತೆ ನೋಟಿಸ್ ಜಾರಿ ಮಾಡಿತ್ತು.

ನೋಟಿಸ್ ನೀಡಿದ ಬಳಿಕವೂ 19 ಮಂದಿ ವಿಚಾರಣೆಗೆ ಗೈರಾಗಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯ, ಎಲ್ಲರ ವಿರುದ್ಧ ಜಾಮೀನುರಹಿತ ವಾರೆಂಟ್ ಹೊರಡಿಸಿತ್ತು. ಎಲ್ಲರನ್ನೂ ಬಂಧಿಸಿ ನ್ಯಾಯಾಲಯದ ಎದುರು ಹಾಜರುಪಡಿಸುವಂತೆ ಪೊಲೀಸರಿಗೆ ಸೂಚಿಸಿತ್ತು.

ಹಲವೆಡೆ ಶೋಧ: ‘ನ್ಯಾಯಾಲಯದ ಆದೇಶ ಜಾರಿಗಾಗಿ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ಕೆಂಪಣ್ಣ ಹಾಗೂ ಇತರರ ಪತ್ತೆಗಾಗಿ ನಗರದ ಹಲವೆಡೆ ಶೋಧ ನಡೆಸಲಾಯಿತು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

‘ಕೆಂಪಣ್ಣ ಸೇರಿ ಕೆಲವರನ್ನು ಬಂಧಿಸಲಾಗಿದೆ. ಎಲ್ಲರನ್ನೂ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು. ನ್ಯಾಯಾಲಯದ ನಿರ್ದೇಶನದನ್ವಯ ಮುಂದಿನ ತನಿಖೆ ಕೈಗೊಳ್ಳಲಾಗುವುದು’ ಎಂದೂ ತಿಳಿಸಿದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT