ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

42 ಪ್ರಕರಣಗಳಲ್ಲಿ ಭಾಗಿ: ತಲೆಮರೆಸಿಕೊಂಡಿದ್ದ ರೌಡಿ ಬಂಧನ

Published 23 ಏಪ್ರಿಲ್ 2024, 16:03 IST
Last Updated 23 ಏಪ್ರಿಲ್ 2024, 16:03 IST
ಅಕ್ಷರ ಗಾತ್ರ

ಬೆಂಗಳೂರು: ತನ್ನ ವಿರುದ್ಧ ದಾಖಲಾಗಿದ್ದ ಪ್ರಕರಣಗಳ ವಿಚಾರಣೆಗೆ ಗೈರಾಗಿ ತಲೆಮರೆಸಿಕೊಂಡಿದ್ದ ರೌಡಿ ಅಜೀಜ್ ಆಸೀಫ್‌ನನ್ನು (33) ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

‘ರೌಡಿ ಆಸೀಫ್, 2015ರಿಂದಲೇ ಅಪರಾಧ ಕೃತ್ಯ ಎಸಗುತ್ತಿದ್ದಾನೆ. ಕಳ್ಳತನ, ಸುಲಿಗೆ ಸೇರಿದಂತೆ 42 ಅಪರಾಧ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ. ಕೆಲ ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಬಂದಿದ್ದ. ಬಾಣಸವಾಡಿ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ’ ಎಂದು ಪೊಲೀಸರು ಹೇಳಿದರು.

‘ಅಪರಾಧ ಪ್ರಕರಣಗಳಲ್ಲಿ ಜಾಮೀನು ಪಡೆದಿದ್ದ ಆಸೀಫ್, ಜೈಲಿನಿಂದ ಹೊರಬಂದು ತಲೆಮರೆಸಿಕೊಂಡಿದ್ದ. ನ್ಯಾಯಾಲಯದ ವಿಚಾರಣೆಗೂ ಪದೇ ಪದೇ ಗೈರಾಗುತ್ತಿದ್ದ. ಈತನ ಬಂಧನಕ್ಕೆ ವಾರಂಟ್ ಸಹ ಜಾರಿಯಾಗಿತ್ತು. ಇತ್ತೀಚಿಗೆ ಈತನನ್ನು ಸೆರೆ ಹಿಡಿಯಲಾಗಿದೆ’ ಎಂದು ತಿಳಿಸಿದರು.

‘ರೌಡಿಯಿಂದ 12 ಮೊಬೈಲ್‌ಗಳು, 4 ಚಿನ್ನದ ಸರ, 1 ಮಾಂಗಲ್ಯ ಜಪ್ತಿ ಮಾಡಲಾಗಿದೆ. ಈತನ ಮತ್ತಷ್ಟು ಕಡೆ ಕಳ್ಳತನ ಮಾಡಿರುವ ಶಂಕೆ ಇದ್ದು, ತನಿಖೆ ಮುಂದುವರಿಸಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT