ಸೋಮವಾರ, ಆಗಸ್ಟ್ 8, 2022
21 °C

ಲಾಕ್‌ಡೌನ್ ನಿಯಮ ಉಲ್ಲಂಘನೆ; ₹ 4.54 ಕೋಟಿ ದಂಡ ಸಂಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೊರೊನಾ ಸೋಂಕು ಹರಡುವಿಕೆ ತಡೆಗೆ ಜಾರಿಗೊಳಿಸಿರುವ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ 1.86 ಲಕ್ಷ ಮಂದಿಯಿಂದ ₹ 4.54 ಕೋಟಿ ದಂಡ ಸಂಗ್ರಹಿಸಲಾಗಿದೆ.

ನಗರದ ಪೊಲೀಸರು ಪ್ರತಿಯೊಂದು ವಿಭಾಗ ವ್ಯಾಪ್ತಿಯಲ್ಲೂ ವಿಶೇಷ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಮಾಸ್ಕ್ ಹಾಕದ ಹಾಗೂ ಅಂತರ ಕಾಯ್ದುಕೊಳ್ಳದವರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳುತ್ತಿದ್ದಾರೆ.

‘ಮಾಸ್ಕ್‌ ಧರಿಸದ 1.52 ಲಕ್ಷ ಹಾಗೂ ಅಂತರ ಕಾಯ್ದುಕೊಳ್ಳದ 34 ಸಾವಿರ ಮಂದಿಗೆ ದಂಡ ವಿಧಿಸಲಾಗಿದೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

48,615 ವಾಹನ ಜಪ್ತಿ; ಲಾಕ್‌ಡೌನ್‌ ವೇಳೆಯಲ್ಲಿ ಅನಗತ್ಯವಾಗಿ ಸಂಚರಿಸಿದ್ದವರ 46,448 ವಾಹನಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

’43,206 ದ್ವಿಚಕ್ರ ವಾಹನ, 2,326 ಮೂರು ಚಕ್ರ ವಾಹನ ಹಾಗೂ 3.083 ನಾಲ್ಕು ಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿ ತಿಳಿಸಿದರು.

‘ಜಪ್ತಿ ಮಾಡಲಾದ ವಾಹನಗಳನ್ನು ಆಯಾ ಠಾಣೆ ವ್ಯಾಪ್ತಿಯಲ್ಲಿ ನಿಲ್ಲಿಸಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ವಾಹನಗಳ ಬಿಡುಗಡೆ ಪ್ರಕ್ರಿಯೆ ನಡೆಯಲಿದೆ’ ಎಂದೂ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು