ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಗೊರೆ ಆಮಿಷವೊಡ್ಡಿ ₹ 4.71 ಲಕ್ಷ ವಂಚನೆ

Last Updated 19 ಜೂನ್ 2021, 20:23 IST
ಅಕ್ಷರ ಗಾತ್ರ

ಬೆಂಗಳೂರು: ವಿದೇಶದಿಂದ ಉಡುಗೊರೆ ಬಂದಿರುವುದಾಗಿ ಹೇಳಿ ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಕರೆ ಮಾಡಿದ್ದ ವಂಚಕರು, ಶುಲ್ಕದ ಹೆಸರಿನಲ್ಲಿ ನಗರದ ಮಹಿಳೆಯೊಬ್ಬರಿಂದ ₹ 4.74 ಲಕ್ಷ ಪಡೆದು ವಂಚಿಸಿದ್ದಾರೆ.

‘ಯಲಹಂಕ ನ್ಯೂಟೌನ್‌ ನಿವಾಸಿಯಾಗಿರುವ 35 ವರ್ಷದ ಮಹಿಳೆ ವಂಚನೆ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಈಶಾನ್ಯ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಮಹಿಳೆಗೆ ಕರೆ ಮಾಡಿದ್ದ ಆರೋಪಿಗಳು, ‘ನಿಮ್ಮ ಹೆಸರಿಗೆ ಇಂಗ್ಲೆಂಡ್‌ನಿಂದ ಉಡುಗೊರೆ ಬಂದಿದೆ. ಕರೆನ್ಸಿ ಹಾಗೂ ಬೆಲೆ ಬಾಳುವ ಚಿನ್ನದ ಆಭರಣಗಳಿವೆ. ಅದನ್ನು ನಿಮ್ಮ ವಿಳಾಸಕ್ಕೆ ಕಳುಹಿಸಲು ಕೆಲ ಶುಲ್ಕ ಹಾಗೂ ಜಿಎಸ್‌ಟಿ ಪಾವತಿ ಮಾಡಬೇಕು’ ಎಂದಿದ್ದರು. ಅದನ್ನು ನಂಬಿದ್ದ ಮಹಿಳೆ, ಆರೋಪಿ ನೀಡಿದ್ದ ಬ್ಯಾಂಕ್ ಖಾತೆಗಳಿಗೆ ಹಂತ ಹಂತವಾಗಿ ₹ 4.74 ಲಕ್ಷ ಹಾಕಿದ್ದರು. ಈ ಸಂಗತಿ ದೂರಿನಲ್ಲಿದೆ, ಹಣ ಪಡೆದ ನಂತರ ಆರೋಪಿ, ಯಾವುದೇ ಉಡುಗೊರೆ ಕಳುಹಿಸಿಲ್ಲ. ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆ ಯಾಗಿದ್ದಾನೆ’ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT