ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಧಿಕಾರಿ ಮನೆಯಲ್ಲಿ 480 ಕಡತ, ಹತ್ತಾರು ಸೀಲು, 120 ಲೀ ಮದ್ಯ ಪತ್ತೆ

Last Updated 8 ಫೆಬ್ರವರಿ 2021, 11:33 IST
ಅಕ್ಷರ ಗಾತ್ರ

ಬೆಂಗಳೂರು: ಕಟ್ಟಡದ ಸ್ವಾಧೀನಾನುಭವ ಪ್ರಮಾಣಪತ್ರ ನೀಡಲು ₹20 ಲಕ್ಷ ಲಂಚ ಪಡೆಯುವಾಗ ಬಂಧಿತರಾಗಿದ್ದ ಬಿಬಿಎಂಪಿ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ದೇವೇಂದ್ರಪ್ಪ ಅವರ ಮನೆಯಲ್ಲಿ ಪಾಲಿಕೆಗೆ ಸಂಬಂಧಿಸಿದ 480 ಕಡತ, ವಿವಿಧ ಅಧಿಕಾರಿಗಳ ಸೀಲುಗಳು ಮತ್ತು 120 ಲೀಟರ್ ದುಬಾರಿ ಬೆಲೆಯ ಮದ್ಯ ಪತ್ತೆಯಾಗಿವೆ.

ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ಶುಕ್ರವಾರ ಸಂಜೆ ದೇವೇಂದ್ರಪ್ಪ ಅವರನ್ನು ಬಂಧಿಸಿದ್ದರು. ಬಳಿಕ ಅವರ ಮನೆಯ ಮೇಲೆ ದಾಳಿ ಮಾಡಿ ಶೋಧ ನಡೆಸಲಾಗಿದೆ.

ಬಿಬಿಎಂಪಿ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ದೇವೇಂದ್ರಪ್ಪ
ಬಿಬಿಎಂಪಿ ನಗರ ಯೋಜನಾ ವಿಭಾಗದ ಸಹಾಯಕ ನಿರ್ದೇಶಕ ದೇವೇಂದ್ರಪ್ಪ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರ ಯೋಜನಾ ವಿಭಾಗಕ್ಕೆ ಸಂಬಂಧಿಸಿದ 480 ಕಡತಗಳನ್ನು ಆರೋಪಿತ ಅಧಿಕಾರಿಯ ಮನೆಯಿಂದ ವಶಕ್ಕೆ ಪಡೆಯಲಾಗಿದೆ. ಪಾಲಿಕೆಯ ಮುಖ್ಯ ಎಂಜಿನಿಯರ್, ಕಾರ್ಯನಿರ್ವಾಹಕ ಎಂಜಿನಿಯರ್, ಸಹಾಯಕ ಎಂಜಿನಿಯರ್ ಸೇರಿದಂತೆ ವಿವಿಧ ಅಧಿಕಾರಿಗಳ ಹೆಸರಿನ ಹತ್ತಾರು ಸೀಲುಗಳೂ ಪತ್ತೆಯಾಗಿವೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರ ಯೋಜನಾ ವಿಭಾಗಕ್ಕೆ ಸಂಬಂಧಿಸಿದ 480 ಕಡತಗಳು
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಗರ ಯೋಜನಾ ವಿಭಾಗಕ್ಕೆ ಸಂಬಂಧಿಸಿದ 480 ಕಡತಗಳು

ವಿವಿಧ ಬ್ರಾಂಡ್ ಗಳ 120 ಲೀಟರ್ ನಷ್ಟು ದುಬಾರಿ ಬೆಲೆಯ ಮದ್ಯದ ದಾಸ್ತಾನು ಪತ್ತೆಯಾಗಿದೆ. ಐಷಾರಾಮಿ ಕಾರು, ಸ್ಥಿರಾಸ್ತಿ ದಾಖಲೆಗಳು, ಬ್ಯಾಂಕ್ ಠೇವಣಿಗೆ ಸಂಬಂಧಿಸಿದ ದಾಖಲೆಗಳನ್ನೂ ವಶಕ್ಕೆ ಪಡೆಯಲಾಗಿದೆ ಎಂದು ಎಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.

ವಿವಿಧ ಅಧಿಕಾರಿಗಳ ಹೆಸರಿನ ಹತ್ತಾರು ಸೀಲುಗಳು
ವಿವಿಧ ಅಧಿಕಾರಿಗಳ ಹೆಸರಿನ ಹತ್ತಾರು ಸೀಲುಗಳು

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT