ಸೋಮವಾರ, ಫೆಬ್ರವರಿ 17, 2020
30 °C
ಕಬ್ಬನ್‌ ಉದ್ಯಾನದಲ್ಲಿ ವಾಹನ ಸವಾರರಿಗೆ ನಿರ್ಬಂಧ: ಭಾಸ್ಕರ್‌ ರಾವ್ ಆದೇಶ

4ನೇ ಶನಿವಾರ ಸಂಚಾರ ನಿಷೇಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕಬ್ಬನ್‌ ಉದ್ಯಾನದಲ್ಲಿ ರಾಷ್ಟ್ರೀಯ ಹಬ್ಬಗಳು, ನಾಲ್ಕನೇ ಶನಿವಾರ ಹಾಗೂ ಎಲ್ಲ ಸರ್ಕಾರಿ ರಜಾ ದಿನದಂದು ವಾಹನ ಸಂಚಾರ ನಿಷೇಧಿಸಿ ಬೆಂಗಳೂರು ನಗರ ಪೊಲೀಸ್‌ ಕಮಿಷನರ್‌ ಭಾಸ್ಕರ್ ರಾವ್‌ ಆದೇಶ ಹೊರಡಿಸಿದ್ದಾರೆ.

ಪ್ರತಿ ಭಾನುವಾರ ಹಾಗೂ ಎರಡನೇ ಶನಿವಾರದಂದು ಈಗಾಗಲೇ ಉದ್ಯಾನದಲ್ಲಿ ವಾಹನ ಸಂಚಾರ ಸಂಪೂರ್ಣ ನಿಷೇಧಿಸಲಾಗಿದೆ. ನಾಲ್ಕನೇ ಶನಿವಾರ ಹಾಗೂ ರಾಷ್ಟ್ರೀಯ ಹಬ್ಬಗಳ ದಿನಗಳಂದು ಸಂಚಾರ ನಿಷೇಧ ಕೋರಿ ತೋಟಗಾರಿಕೆ ಇಲಾಖೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿ ಪೊಲೀಸ್ ಇಲಾಖೆ ಈ ಆದೇಶಹೊರಡಿಸಿದೆ.

‘ಉದ್ಯಾನದ ಪರಿಸರಕ್ಕೆ ಹಾನಿ ತಡೆಯುವ ಉದ್ದೇಶದಿಂದ ವಾಹನ ಸಂಚಾರ ನಿಷೇಧ ಮಾಡುವಂತೆ ತೋಟಗಾರಿಕೆ ಇಲಾಖೆಯ ನಿರ್ದೇಶಕರಿಗೆ ನಾಲ್ಕು ತಿಂಗಳ ಹಿಂದೆ ಪತ್ರ ಬರೆದಿದ್ದೆ. ಈ ಕುರಿತು ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರದ ಮುಖ್ಯಕಾರ್ಯದರ್ಶಿಗಳ ನೇತೃತ್ವದಲ್ಲಿ ಸಭೆ ನಡೆಯಿತು. ನಿಷೇಧ ಈ ವಾರದಿಂದಲೇ ಜಾರಿಯಾಗಿದೆ’ ಎಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ (ಕಬ್ಬನ್ ಉದ್ಯಾನ) ಜಿ.ಕುಸುಮಾ ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು