ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪರೀಕ್ಷಾ ಶುಲ್ಕ ಶೇ 50ರಷ್ಟು ರಿಯಾಯಿತಿ

Last Updated 15 ಜುಲೈ 2020, 20:29 IST
ಅಕ್ಷರ ಗಾತ್ರ

ಬೆಂಗಳೂರು: ಪದವಿ‌‌, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸ್‌ ಗಳ ಮಧ್ಯಂತರ ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ರದ್ದು‌ ಮಾಡಿರುವುದರಿಂದ ಮುಂದಿ‌ನ ಸೆಮಿಸ್ಟರ್‌ಗಳ ಪರೀಕ್ಷಾ ಶುಲ್ಕದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎ‌ನ್. ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕ ಸಂಗ್ರಹಿಸಿದ್ದು ಅದನ್ನು ವಾಪಸ್ ಕೊಡಿಸಿ‌ ಎಂದು ವಿದ್ಯಾರ್ಥಿಗಳು ಮನವಿ ಮಾಡಿದ್ದರು. ಇದಕ್ಕೆ ಸ್ಪಂದಿಸಿದ ಸಚಿವರು,‌ ಪರೀಕ್ಷೆ ರದ್ದಾಗಿದ್ದರೂ ಮೌಲ್ಯಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿ‌ನ ಸೆಮಿಸ್ಟರ್‌ಗಳ ಪರೀಕ್ಷಾ ಶುಲ್ಕದಲ್ಲಿ ಶೇ 50ರಷ್ಟು ರಿಯಾಯಿತಿ ನೀಡಲು ಸೂಚಿಸಲಾಗುವುದು ಎಂದು ಹೇಳಿದ್ದಾರೆ.

ಈ ಸಂಬಂಧ ಎಲ್ಲ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆ ಕಳುಹಿಸುವಂತೆ ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಸಚಿವರು ಸೂಚಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT