ಬೆಂಗಳೂರು: ರೈತರ ಸೋಗಿನಲ್ಲಿ ಕಾನೂನು ಬಾಹಿರವಾಗಿ ಸರ್ಕಾರಿ ಭೂಮಿಯನ್ನು ಪಡೆದಿರುವವರಿಂದ ಭೂಮಿ ವಶಪಡಿಸಿಕೊಳ್ಳಲಾಗುವುದು ಎಂದು ಶಾಸಕ ಎಸ್.ಟಿ. ಸೋಮಶೇಖರ್ ತಿಳಿಸಿದರು.

ಕೆ.ಗೊಲ್ಲಹಳ್ಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಅರ್ಹ ಫಲಾನುಭವಿಗಳು ಯಾವುದೇ ಭಯಪಡುವ ಅಗತ್ಯವಿಲ್ಲ. ಕೆಲ ರಾಜಕಾರಣಿಗಳು ನಕಲಿ ದಾಖಲೆ ಸೃಷ್ಟಿಸಿ ಬಗರ್‌ಹುಕುಂ ಭೂಮಿಯನ್ನು ಅಕ್ರಮವಾಗಿ ಪಡೆದಿದ್ದಾರೆ. ಈಗಾಗಲೇ ಅಂತಹ ಜಮೀನುಗಳನ್ನು ಗುರುತಿಸಿ, ಕಂದಾಯ ಇಲಾಖೆಗೆ ನೀಡಿದ್ದೇವೆ’ ಎಂದರು.

ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಬಿ.ಆರ್.ಶಿವಮಾದಯ್ಯ, ‘ಕೆ.ಗೊಲ್ಲಹಳ್ಳಿ ಮತ್ತು ಎಚ್.ಗೊಲ್ಲಹಳ್ಳಿ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಿಗೆ ಕುಡಿಯುವ ನೀರು, ಒಳಚರಂಡಿ, ಶಾಲಾ ಕಟ್ಟಡಗಳ ನಿರ್ಮಾಣ, ಕೆಲವು ಹಳ್ಳಿಗಳಿಗೆ ಚರಂಡಿ, ಡಾಂಬರೀಕರಣ, ಪಶು ಆಸ್ಪತ್ರೆ, ಆರೋಗ್ಯ ಕೇಂದ್ರ, ಸಹಕಾರ ಸಂಘಗಳ ಕಟ್ಟಡಗಳನ್ನು ನಿರ್ಮಿಸಿ ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದೇವೆ’ ಎಂದರು.

ಕುಂಬಳಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಚಿಕ್ಕರಾಜು,‘ನಾಲ್ಕೂವರೆ ವರ್ಷಗಳ ಕಾಲ ನಾಪತ್ತೆಯಾಗಿದ್ದ ಜೆಡಿಎಸ್, ಬಿಜೆಪಿ ನಾಯಕರು ಈಗ ಜನರ ದಿಕ್ಕು ತಪ್ಪಿಸಲು ಮುಂದಾಗಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.