ಬೆಂಗಳೂರು: ‘ಅಕ್ರಮವಾಗಿ ಕಾರ್ಯ ನಿರ್ವಹಿಸುತ್ತಿರುವ ಕಸಾಯಿ ಖಾನೆ ಹಾಗೂ ಅಕ್ರಮ ಜಾನುವಾರು ಸಾಗಣೆ ತಡೆಗೆ ಕ್ರಮ ಕೈಗೊಂಡಿಲ್ಲ’ ಎಂದು ಆರೋಪಿಸಿದ ಅರ್ಜಿಗೆ ಸಂಬಂಧಿಸಿದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತರು ಖುದ್ದು ಹಾಜರಾಗುವಂತೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಸಂಬಂಧ ‘ಗೋ ಗ್ಯಾನ್ ಫೌಂಡೇಶನ್’ ಸಲ್ಲಿಸಿರುವ ನ್ಯಾಯಾಂಗ ನಿಂದನೆ ಅರ್ಜಿಯನ್ನು ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಹಾಗೂ ನ್ಯಾಯಮೂರ್ತಿ ಅರವಿಂದ್ ಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿತು.

‘ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಕಾರ್ಯದರ್ಶಿ ಹಾಗೂ ಪಶು ಸಂಗೋಪನೆ ಇಲಾಖೆ ಕಾರ್ಯ
ದರ್ಶಿಯೂ ಮುಂದಿನ ವಿಚಾರಣೆ ವೇಳೆಗೆ ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ವಿವರಣೆ ನೀಡಬೇಕು’ ಎಂದು ಸೂಚಿಸಲಾಗಿದೆ. ಇದೇ 16ಕ್ಕೆ ಅರ್ಜಿ ವಿಚಾರಣೆ
ಮುಂದೂಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.