‘ನಾಲ್ವಡಿ ಕೃಷ್ಣರಾಜ ಒಡೆಯರ್‌ ಕೊಡುಗೆಗಳು ಅವಿಸ್ಮರಣೀಯ’

7

‘ನಾಲ್ವಡಿ ಕೃಷ್ಣರಾಜ ಒಡೆಯರ್‌ ಕೊಡುಗೆಗಳು ಅವಿಸ್ಮರಣೀಯ’

Published:
Updated:
‘ನಾಲ್ವಡಿ ಕೃಷ್ಣರಾಜ ಒಡೆಯರ್‌ ಕೊಡುಗೆಗಳು ಅವಿಸ್ಮರಣೀಯ’

ಬೆಂಗಳೂರು: ‘ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕೊಡುಗೆಗಳು ಅವಿಸ್ಮರಣೀಯ. ಅವರೊಬ್ಬ ಉತ್ತಮ ಆಡಳಿತಗಾರ ಆಗಿದ್ದರು’ ಎಂದು ರಾಜ್ಯ ಸರ್ಕಾರದ ನಿವೃತ್ತ ವಿಶೇಷ ಕಾರ್ಯದರ್ಶಿ ಬಿ.ವಿ.ಕುಲಕರ್ಣಿ ಅಭಿಪ್ರಾಯಪಟ್ಟರು. 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೋಮವಾರ ಏರ್ಪಡಿಸಿದ್ದ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ 134 ನೇ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ನಾಲ್ವಡಿ ಕೃಷ್ಣರಾಜ್‌ ಒಡೆಯರ್‌, ಸರ್. ಎಂ.ವಿಶ್ವೇಶ್ವರಯ್ಯ ಹಾಗೂ ಮಿರ್ಜಾ ಇಸ್ಮಾಯಿಲ್‌ ಅವರನ್ನು ಪ್ರತ್ಯೇಕವಾಗಿ ನೋಡಲು  ಸಾಧ್ಯವಿಲ್ಲ. ಅವರೆಲ್ಲರ ಧ್ಯೇಯೋದ್ದೇಶಗಳು ಒಂದೇ ಆಗಿದ್ದವು. ಅವರ ಕೊಡುಗೆಗಳಿಂದಲೇ ಮೈಸೂರು ಸಂಸ್ಥಾನ ಅಭಿವೃದ್ಧಿ ಹಾದಿ ಹಿಡಿಯಿತು.  ಒಕ್ಕಲಿಗ ಜನಾಂಗಕ್ಕೆ ಶಿಕ್ಷಣ ನೀಡಿ, ಅವರನ್ನು ಮೇಲೆತ್ತಿದವರು ಒಡೆಯರ್‌ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಮೊದಲ ಬಾರಿಗೆ ಪ್ರಜಾಪ್ರತಿನಿಧಿಗಳ ಸಭೆ ಆಯೋಜನೆ, ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪನೆ, ಆಡಳಿತದಲ್ಲಿ ಮೀಸಲಾತಿ, ಸ್ತ್ರೀಯರಿಗೆ ಮತದಾನದ ಹಕ್ಕು, ಗೆಜ್ಜೆ ಪೂಜೆಯಂತಹ ಅನಿಷ್ಠ ಪದ್ಧತಿಗಳ ನಿವಾರಣೆ ಮಾಡಿದ ಕೀರ್ತಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರದ್ದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್‌.ಆರ್‌.ವಿಶುಕುಮಾರ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry