‘ವಾಲ್ಮೀಕಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ’

7

‘ವಾಲ್ಮೀಕಿ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಿ’

Published:
Updated:

ಬೆಂಗಳೂರು: ಸಮಾಜದಲ್ಲಿ ವಾಲ್ಮೀಕಿ ನಾಯಕ ಸಮುದಾಯಕ್ಕೆ ನೂತನ ಸಚಿವ ಸಂಪುಟದಲ್ಲಿ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಸರ್ಕಾರಕ್ಕೆ ಒತ್ತಾಯಿಸಿತು.

ಪತ್ರಿಕಾಗೋಷ್ಠಿಯಲ್ಲಿ ಸಂಘದ ಅಧ್ಯಕ್ಷ ಎಂ.ನರಸಿಂಹಯ್ಯ ಮಾತನಾಡಿ, ‘ವಾಲ್ಮೀಕಿ ಸಮುದಾಯದ 9 ಮಂದಿ ಕಾಂಗ್ರೆಸ್‌ನಿಂದ ಮತ್ತು ಒಬ್ಬರು ವಿಧಾನ ಪರಿಷತ್‌ ಸದಸ್ಯರಾಗಿ, ಒಬ್ಬರು ಜೆಡಿಎಸ್‌ನಿಂದ ಆಯ್ಕೆಯಾಗಿದ್ದಾರೆ. ಹೀಗಾಗಿ ಮೈತ್ರಿ ಸರ್ಕಾರದಲ್ಲಿ ನಾಲ್ವರಿಗೆ ಸಚಿವ ಸ್ಥಾನ ನೀಡಬೇಕು’ ಎಂದು ಹೇಳಿದರು.

ಬಿಜೆಪಿ ಸರ್ಕಾರ ಸಮುದಾಯಕ್ಕೆ ಮೂರು ಸಚಿವ ಸ್ಥಾನಗಳನ್ನು ನೀಡಿತ್ತು. ಆದರೆ, ಹಿಂದಿನ ಕಾಂಗ್ರೆಸ್‌ ಸರ್ಕಾರದಲ್ಲಿ ಒಬ್ಬರಿಗೆ ಮಾತ್ರ ಸಚಿವ ಸ್ಥಾನ ನೀಡಿದ್ದರು. ಅದೇ ರೀತಿ ಈ ಬಾರಿ ಸಮುದಾಯಕ್ಕೆ ಸಂಪುಟದಲ್ಲಿ ಸ್ಥಾನಮಾನ ನೀಡಿ ಸಾಮಾಜಿಕ ನ್ಯಾಯವನ್ನು ಒದಗಿಸಬೇಕು. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಎಚ್ಚರಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry