₹ 50 ಸಾವಿರ ಠೇವಣಿ ಇರಿಸಿ: ಬಿಡಿಎಗೆ ಹೈಕೋರ್ಟ್‌ ಆದೇಶ

7

₹ 50 ಸಾವಿರ ಠೇವಣಿ ಇರಿಸಿ: ಬಿಡಿಎಗೆ ಹೈಕೋರ್ಟ್‌ ಆದೇಶ

Published:
Updated:
₹ 50 ಸಾವಿರ ಠೇವಣಿ ಇರಿಸಿ: ಬಿಡಿಎಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ‘ಅರ್ಕಾವತಿ ಬಡಾವಣೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಅನುಷ್ಠಾನಗೊಳಿಸಿರುವ ಕುರಿತ ಸಮಗ್ರ ವರದಿ ಸಲ್ಲಿಸಿಲ್ಲ’ ಎಂಬ ಕಾರಣಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (ಬಿಡಿಎ) ಆಯುಕ್ತರು ₹ 50 ಸಾವಿರ ಠೇವಣಿ ಇರಿಸುವಂತೆ ಹೈಕೋರ್ಟ್‌ ಆದೇಶಿಸಿದೆ.

ಈ ಸಂಬಂಧ ಎಚ್.ಬಿ.ಶಿವರಾಮ್ ಸೇರಿದಂತೆ ಆರು ಜನರು ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿನೀತ್ ಕೊಠಾರಿ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.

‘ಸುಪ್ರೀಂಕೋರ್ಟ್ 2010ರಲ್ಲಿ ನೀಡಿರುವ ಆದೇಶದ ಅನುಸಾರ ಹೆಬ್ಬಾಳ-ಕೆಂಪಾಪುರ ಪ್ರದೇಶದಲ್ಲಿ ದ್ವೀಪದಂತಿರುವ ಎಷ್ಟು ಎಕರೆ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ ಹಾಗೂ ಎಷ್ಟು ಭೂಮಿಯನ್ನು ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲಾಗಿದೆ. ಬಡಾವಣೆಯಲ್ಲಿ ಈವರೆಗೆ ಎಷ್ಟು ನಿವೇಶನ ಹಂಚಿಕೆ ಮಾಡಲಾಗಿದೆ ಎಂಬ ವಿವರಗಳನ್ನೊಳಗೊಂಡ ವಿಸ್ತೃತ ವರದಿಯನ್ನು ಮುಂದಿನ ವಿಚಾರಣೆ ವೇಳೆ ಕೋರ್ಟ್‌ಗೆ ಸಲ್ಲಿಸಿ ಎಂದು ಈ ಹಿಂದಿನ ವಿಚಾರಣೆ ವೇಳೆ ನ್ಯಾಯಪೀಠ ಬಿಡಿಎಗೆ ನಿರ್ದೇಶಿಸಿತ್ತು.

ಆದರೆ, ಬಿಡಿಎ ಈ ವರದಿ ನೀಡಲಿಲ್ಲ. ಈ ಕಾರಣಕ್ಕಾಗಿ ಆಯುಕ್ತರು ತಮ್ಮ ಹಣವನ್ನು ಇದೇ 11ರೊಳಗೆ ಹೈಕೋರ್ಟ್ ರಿಜಿಸ್ಟ್ರಾರ್ ಅವರಲ್ಲಿ ಠೇವಣಿ ಇರಿಸುವಂತೆ ಆದೇಶಿಸಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry