ಅಂಗಡಿಗಳ ಮೇಲೆ ದಾಳಿ: ನಿಷೇಧಿತ ಪ್ಲಾಸ್ಟಿಕ್‌ ವಶ

7

ಅಂಗಡಿಗಳ ಮೇಲೆ ದಾಳಿ: ನಿಷೇಧಿತ ಪ್ಲಾಸ್ಟಿಕ್‌ ವಶ

Published:
Updated:

ಬೆಂಗಳೂರು: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಹಾಗೂ ಬಿಬಿಎಂಪಿ ಅಧಿಕಾರಿಗಳು ಮಂಗಳವಾರ ಹಾಗೂ ಬುಧವಾರ ಕೆ.ಆರ್.ಮಾರುಕಟ್ಟೆಯಲ್ಲಿರುವ ಅಂಗಡಿಗಳ ಮೇಲೆ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಪ್ಲಾಸ್ಟಿಕ್‌ ಚೀಲ, ಚಮಚ, ಲೋಟ, ತಟ್ಟೆ, ಥರ್ಮಾಕೋಲ್‌ ಬಟ್ಟಲು ಸೇರಿದಂತೆ 500 ಕೆ.ಜಿ ವಶಪಡಿಸಿಕೊಳ್ಳಲಾಗಿದೆ. ನಿಷೇಧಿತ ಪ್ಲಾಸ್ಟಿಕ್ ವಸ್ತುಗಳನ್ನು ಮಾರುತ್ತಿದ್ದ ಅಂಗಡಿ ಮಾಲೀಕರಿಂದ ಒಟ್ಟು ₹21,000 ದಂಡ ವಸೂಲಿ ಮಾಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry