ಬಿಬಿಎಂಪಿ ಕಚೇರಿಯಲ್ಲಿ ನೆಟ್‌ವರ್ಕ್‌ ಸಮಸ್ಯೆ

7

ಬಿಬಿಎಂಪಿ ಕಚೇರಿಯಲ್ಲಿ ನೆಟ್‌ವರ್ಕ್‌ ಸಮಸ್ಯೆ

Published:
Updated:

ಬೆಂಗಳೂರು: ಬಿಎಸ್ಎನ್ಎಲ್ ನೆಟ್‌ವರ್ಕ್‌ ಸಮಸ್ಯೆಯಿಂದ ನೋಂದಣಿ, ಮುದ್ರಾಂಕ ಇಲಾಖೆ ಉಪನೋಂದಣಾಧಿಕಾರಿ ಮತ್ತು ವಿವಾಹ ನೋಂದಣಿಯ ಕಚೇರಿಯಲ್ಲಿ ಕಾರ್ಯ ಚಟುವಟಿಕೆ ಸ್ಥಗಿತಗೊಂಡಿದೆ.

ಮಹದೇವಪುರ ವಲಯದ ಬಿ.ನಾರಾಯಣಪುರದಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಮೇ 30ರಿಂದ ಈ ಸಮಸ್ಯೆ ಕಾಣಿಸಿಕೊಂಡಿದೆ. ಸಾರ್ವಜನಿಕರು ಯಾವುದೇ ಕೆಲಸವಾಗದೆ ಬರಿಗೈಯಲ್ಲಿ ವಾಪಸಾಗುತ್ತಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಲ್ಲಿ ವಾಗ್ವಾದಗಳು ಸಾಮಾನ್ಯ. ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು ಎಂದು ಜನರು ಒತ್ತಾಯಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry