ಚಿಕೂನ್‌ ಗುನ್ಯಾ, ಡೆಂಗಿ ತಡೆಗೆ ಕ್ರಮ

7

ಚಿಕೂನ್‌ ಗುನ್ಯಾ, ಡೆಂಗಿ ತಡೆಗೆ ಕ್ರಮ

Published:
Updated:

ಬೆಂಗಳೂರು: ರಾಜ್ಯದಲ್ಲಿ ಮಳೆ ಆರಂಭವಾಗಿರುವುದರಿಂದ ಚಿಕೂನ್‌ ಗುನ್ಯಾ ಮತ್ತು ಡೆಂಗಿ ಹರಡುವುದನ್ನು ತಡೆಯಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ಶಿವಾನಂದ ಪಾಟೀಲ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಚಿವರಾದ ಬಳಿಕ ಮೊದಲ ಬಾರಿಗೆ ಅಧಿಕಾರಿಗಳ ಜತೆ ಸಭೆ ನಡೆಸಿ, ಮಳೆಯಿಂದ ಬರುವ ಸೋಂಕು ರೋಗಗಳನ್ನು ತಡೆಯಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೇ ಲೋಪವಾದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಅವರು ಎಚ್ಚರಿಕೆ ನೀಡಿದರು.

ನಿಫಾ ವೈರಸ್‌ನಿಂದಾಗಿ ಮಾವು ಮತ್ತು ದ್ರಾಕ್ಷಿ ಬೆಳೆಗಾರರು ಆತಂಕಕ್ಕೆ ಒಳಗಾಗಿದ್ದಾರೆ. ಬಾವಲಿಗಳಿಂದ ವೈರಸ್‌ ಹರಡುತ್ತದೆ. ಇದರ ಸೋಂಕಿಗೆ ಒಳಗಾಗುವವರು ಸಾವನ್ನಪ್ಪುತ್ತಾರೆ. ಈ ಬಗ್ಗೆ ರೈತರಿಗೆ ಅರಿವು ಮೂಡಿಸಬೇಕು ಎಂದು ಅವರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry