7

ಪಿಯು ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ವಿತರಣೆ ಆರಂಭ

Published:
Updated:
ಪಿಯು ವಿದ್ಯಾರ್ಥಿಗಳಿಗೆ ಬಸ್‌ಪಾಸ್‌ ವಿತರಣೆ ಆರಂಭ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಯು ಪ್ರಥಮ ಮತ್ತು ದ್ವಿತೀಯ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ಸೋಮವಾರದಿಂದ ಪಾಸುಗಳನ್ನು ವಿತರಣೆ ಮಾಡುತ್ತಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಾಸ್ ವಿತರಿಸುತ್ತಿದ್ದು, ಪಾಸ್‌ ಪಡೆದವರು ಸಂಸ್ಕರಣಾ ಶುಲ್ಕ ಮತ್ತು ಅಪಘಾತ ಪರಿಹಾರ ನಿಧಿ ₹150 ಪಾವತಿಸಬೇಕು. ಉಚಿತ ಬಸ್ ಪಾಸ್ ಪಡೆಯಲು ವಿದ್ಯಾರ್ಥಿಗಳು ಅರ್ಜಿ ಜೊತೆಗೆ ಜಾತಿ ಪ್ರಮಾಣ ಪತ್ರದ ಪ್ರತಿ ಲಗತ್ತಿಸಬೇಕು. ಉಳಿದ ವಿದ್ಯಾರ್ಥಿಗಳು ₹1050 ಪಾವತಿಸಿ ಪಾಸುಗಳನ್ನು ಪಡೆಯಬಹುದು.

ಪ್ರಸಕ್ತ ಸಾಲಿನ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಮೇ18 ರಿಂದ ‌ತರಗತಿಗಳು ಆರಂಭವಾಗಿರುವ ಹಿನ್ನೆಲೆಯಲ್ಲಿ ಕಳೆದ ವರ್ಷದ ಪಾಸನ್ನು ತೋರಿಸಿ ಜೂನ್‌ ಅಂತ್ಯದವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಜೂನ್‌ ಅಂತ್ಯದೊಳಗಾಗಿ ಹೊಸ ಪಾಸ್‌ ಪಡೆದುಕೊಳ್ಳಬೇಕು.

ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣಗಳಲ್ಲಿ ಹಾಗೂ ಸಂಸ್ಥೆಯ ವೆಬ್‍ಸೈಟ್‍ www.ksrtc.in ನಲ್ಲಿ ಪಾಸ್ ಅರ್ಜಿಗಳು ಲಭ್ಯವಿರುತ್ತವೆ. ಭರ್ತಿ ಮಾಡಿದ ಅರ್ಜಿಗಳನ್ನು ಶಾಲೆಗಳು ದೃಢೀಕರಿಸಬೇಕು. ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿರುವ ಶಾಲೆಗಳ ಮೂಲಕ ಬಸ್ ಪಾಸ್‍ಗಳನ್ನು ವಿತರಿಸಲಾಗುವುದು ಎಂದು ಸಂಸ್ಥೆ ಮುಖ್ಯ ಸಂಚಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry