ಕಿಮ್ಸ್‌ ಸಿಬ್ಬಂದಿಯಿಂದ ಪ್ರತಿಭಟನೆ

7

ಕಿಮ್ಸ್‌ ಸಿಬ್ಬಂದಿಯಿಂದ ಪ್ರತಿಭಟನೆ

Published:
Updated:

ಬೆಂಗಳೂರು: ‘ಅಗತ್ಯಕ್ಕಿಂತ ಹೆಚ್ಚಿನ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ’ ಎಂದು ಆರೋಪಿಸಿ ಕಿಮ್ಸ್‌ ವೈದ್ಯರು ಹಾಗೂ ಸಿಬ್ಬಂದಿ ಆಸ್ಪತ್ರೆಯ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದ್ದಾರೆ.

‘ಈಗಿರುವ ವೈದ್ಯರು ಹಾಗೂ ಸಿಬ್ಬಂದಿಗೇ ಸರಿಯಾಗಿ ಸಂಬಳ ಕೊಡುತ್ತಿಲ್ಲ. ಹೀಗಿದ್ದರೂ, ಪ್ರತಿದಿನ ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಬಾಕಿ ಇರುವ ಸಂಬಳವನ್ನು ಮೊದಲು ಕೊಡಬೇಕು. ಹೊಸದಾಗಿ ನೇಮಕ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕು’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಅಗತ್ಯಕ್ಕಿಂತ ಹೆಚ್ಚಿನ ಸಿಬ್ಬಂದಿ ನೇಮಕ ಮಾಡಿಕೊಂಡಿಲ್ಲ. ಆರನೇ ವೇತನ ಆಯೋಗವನ್ನು ಜಾರಿಗೆ ತರಲು ಒತ್ತಾಯ ಮಾಡುತ್ತಿದ್ದಾರೆ. ಆದರೆ ಇದನ್ನು ನಮ್ಮ ಮಿತಿಯನ್ನು ನೋಡಿಕೊಂಡು ಮಾಡಬೇಕಾಗುತ್ತದೆ’ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry