ಪರಿಷತ್ತಿನಲ್ಲಿ ಕಾಂಗ್ರೆಸ್‌ ಅತೀ ದೊಡ್ಡ ಪಕ್ಷ

7

ಪರಿಷತ್ತಿನಲ್ಲಿ ಕಾಂಗ್ರೆಸ್‌ ಅತೀ ದೊಡ್ಡ ಪಕ್ಷ

Published:
Updated:

ಬೆಂಗಳೂರು: ಒಟ್ಟು 75 ಸದಸ್ಯ ಬಲದ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್‌ ಅತೀ ಹೆಚ್ಚು ಸದಸ್ಯರನ್ನು ಹೊಂದಿರುವ ದೊಡ್ಡ ಪಕ್ಷವಾಗಿದೆ.

ರಾಜ್ಯದ ಆರು ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ಚುನಾವಣೆಯಲ್ಲಿ ಒಂದು ಸ್ಥಾನ ಮಾತ್ರ ಕಾಂಗ್ರೆಸ್‌ಗೆ ಸಿಕ್ಕಿದೆ. ಈಶಾನ್ಯ ಪದವೀಧರ ಕ್ಷೇತ್ರದಿಂದ ಚಂದ್ರಶೇಖರ ಪಾಟೀಲ ಆಯ್ಕೆಯಾಗುವುದರೊಂದಿಗೆ ಕಾಂಗ್ರೆಸ್‌ ಬಲ 34ಕ್ಕೆ ಏರಿದೆ.

ಕಳೆದ 30 ವರ್ಷಗಳಿಂದಲೂ ಬಿಜೆಪಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ಪ್ರಾಬಲ್ಯ ಮೆರೆದಿತ್ತು. ಮೊದಲ ಬಾರಿಗೆ ಎದುರಾಳಿಯ ಕೋಟೆಗೆ ಲಗ್ಗೆ ಹಾಕುವಲ್ಲಿ ಕಾಂಗ್ರೆಸ್‌ ಯಶಸ್ವಿಯಾಗಿದೆ.

ಮೂರು ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ಮೂಲಕ ಬಿಜೆಪಿ ಮೇಲ್ಮನೆಯಲ್ಲಿ ಎರಡನೇ ದೊಡ್ಡ ಪಕ್ಷವಾಗಿದೆ. ಈ ಪಕ್ಷದ 19 ಸದಸ್ಯರು ಇದ್ದಾರೆ. ಎರಡು ಕ್ಷೇತ್ರಗಳಲ್ಲಿ ಜಯಗಳಿಸಿರುವ ಜೆಡಿಎಸ್‌ನ ಸದಸ್ಯ ಬಲ 13. ಇಬ್ಬರು ಪಕ್ಷೇತರ ಸದಸ್ಯರೂ ಇದ್ದಾರೆ.

ವಿಧಾನ ಪರಿಷತ್ತಿನ ಸಭಾಪತಿ ಡಿ.ಎಚ್‌. ಶಂಕರಮೂರ್ತಿ, ಗಣೇಶ್‌ ಕಾರ್ಣಿಕ್‌, ರಾಮಚಂದ್ರಗೌಡ, ಅಮರನಾಥ ಪಾಟೀಲ ಮತ್ತು ರಮೇಶ ಬಾಬು ನಿವೃತ್ತಿ ಹೊಂದಲಿದ್ದಾರೆ. ಮರಿತಿಬ್ಬೇಗೌಡ ಮರು ಆಯ್ಕೆಯಾಗಿದ್ದಾರೆ. ಈ ಆರು ಕ್ಷೇತ್ರಗಳಿಗೆ ಚುನಾವಣೆ ನಡೆದಿತ್ತು.

ಕೊರಟಗೆರೆ, ಶಿವಮೊಗ್ಗ ಹಾಗೂ ಗೋವಿಂದರಾಜ ನಗರ ಕ್ಷೇತ್ರಗಳಿಂದ ವಿಧಾನಸಭೆಗೆ ಆಯ್ಕೆಯಾಗಿರುವ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಬಿಜೆಪಿ ನಾಯಕರಾದ ಕೆ.ಎಸ್‌. ಈಶ್ವರಪ್ಪ ಹಾಗೂ ವಿ.ಸೋಮಣ್ಣ ಅವರ ರಾಜೀನಾಮೆಯಿಂದಾಗಿ ತೆರವಾದ ಸ್ಥಾನಗಳೂ ಸೇರಿದಂತೆ ಒಟ್ಟು ಏಳು ಸ್ಥಾನಗಳು ಖಾಲಿ ಇವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry