‘ಸಿದ್ದರಾಮಯ್ಯ ನಿಜವಾದ ಹೀರೋ’

7

‘ಸಿದ್ದರಾಮಯ್ಯ ನಿಜವಾದ ಹೀರೋ’

Published:
Updated:

ಬೆಂಗಳೂರು: ‘ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಿಂದುಳಿದ ವರ್ಗಗಳ ಹೀರೋ. ಅವರು ಕುರುಬ ಸಮುದಾಯ ಮಾತ್ರವಲ್ಲದೆ, ಎಲ್ಲ ಸಮುದಾಯದ ಮುಂಚೂಣಿ ನಾಯಕರು’ ಎಂದು ವಿಧಾನ ಪರಿಷತ್ ಸದಸ್ಯ ಎಚ್‌.ಎಂ.ರೇವಣ್ಣ ಹೇಳಿದ್ದಾರೆ.

ಮಹಾಲಕ್ಷ್ಮಿಲೇಔಟ್‌ನ ತಮ್ಮ ಮನೆಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ‘ಸಂಪುಟ ವಿಸ್ತರಣೆ ವೇಳೆ ನನಗೆ ಬೇಸರವಾಗಿದ್ದು ನಿಜ. ಆದರೆ, ಆ ಸಹಜ ಅತೃಪ್ತಿಯನ್ನೇ ತಪ್ಪಾಗಿ ಅರ್ಥೈಸಲಾಯಿತು. ಸಿದ್ದರಾಮಯ್ಯ ಕುರುಬ ಸಮುದಾಯದ ವಿಲನ್ ಎಂದು ನಾನು ಎಲ್ಲೂ ಹೇಳಿಲ್ಲ. ಆದರೆ, ಅಂತಹ ಹೇಳಿಕೆ ಮಾಧ್ಯಮಗಳಲ್ಲಿ ಬಂತು. ಅವರು ಕುರುಬ ಸಮುದಾಯದ ನಿಜವಾದ ಹೀರೋ’ ಎಂದರು.

‘ನಾನು ಅಸಮಾಧಾನಗೊಂಡಿದ್ದ ಸಂದರ್ಭದಲ್ಲಿ ಬೇರೆ ಪಕ್ಷದ ಮುಖಂಡರು ತಮ್ಮ ಜತೆ ಬರುವಂತೆ ಆಹ್ವಾನಿಸಿದ್ದರು. 40 ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಪಕ್ಷವನ್ನು ಯಾವುದೇ ಕಾರಣಕ್ಕೂ ತೊರೆಯುವುದಿಲ್ಲ ಎಂದು ಅವರಿಗೆ ಉತ್ತರಿಸಿದ್ದೆ.’

‘ಸಿದ್ದರಾಮಯ್ಯ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ಅವರೇ ನಮ್ಮ ನಾಯಕರು. ಮುಂದಿನ ದಿನಗಳಲ್ಲಿ ರಾಷ್ಟ್ರಮಟ್ಟದ ಮುಂಚೂಣಿ ನಾಯಕರಾಗುವ ಲಕ್ಷಣಗಳು ಸಿದ್ದರಾಮಯ್ಯ ಅವರಿಗಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ಆಡಳಿತವನ್ನು ಸುಲಲಿತವಾಗಿ ಕೊಂಡೊಯ್ಯುತ್ತಿದ್ದಾರೆ. ಅವರು ಹಾಗೂ ಕಾಂಗ್ರೆಸ್ ನಾಯಕರು ಮುಂದಿನ ಸಚಿವ ಸಂಪುಟ ವಿಸ್ತರಣೆಯಲ್ಲಿ ಕುರುಬ ಸಮುದಾಯಕ್ಕೆ ಶುಭಸುದ್ದಿ ನೀಡಲಿದ್ದಾರೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry