ಪ್ರತಿಭಟನೆ ಇಂದು

7

ಪ್ರತಿಭಟನೆ ಇಂದು

Published:
Updated:

ಬೆಂಗಳೂರು: ಪಾಲಿಕೆಯಲ್ಲಿ ಪ್ರಕಟಿಸಿರುವ ಅವೈಜ್ಞಾನಿಕ ಸೇವಾ ಜೇಷ್ಠತಾ ಪಟ್ಟಿ ಹಾಗೂ ಮೀಸಲಾತಿ ಪಾಲನೆಯಲ್ಲಿ ಆದ ಅನ್ಯಾಯದ ವಿರುದ್ಧ ಹೋರಾಟ ಮಾಡಲು ‘ರಾಜ್ಯ ಸರ್ಕಾರದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ನೌಕರರ ಸಮನ್ವಯ ಸಮಿತಿ’ಯು ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಜೂ.15ರಂದು ಬೆಳಿಗ್ಗೆ 11ಕ್ಕೆ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನವರೆಗೂ ಬೃಹತ್‌ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದೆ.

ಬೆಂಗಳೂರು ಮಹಾನಗರ ಪಾಲಿಕೆ ಎಸ್ಸಿ, ಎಸ್ಟಿ ಅಧಿಕಾರಿಗಳ ಮತ್ತು ನೌಕರರ ಕೇಂದ್ರ ಮಹಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಸಿ.ವೆಂಕಟಚಾಲಯ್ಯ ಈ ವಿಷಯ ತಿಳಿಸಿದರು.

‘ಬಡ್ತಿ ಮೀಸಲಾತಿ ರಕ್ಷಣೆ ಮತ್ತು ಸಂವಿಧಾನ ಬದ್ಧ ಹಕ್ಕುಗಳ ಉಳಿವಿ’ಗಾಗಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಂಡಿದ್ದು, ‘ಬಡ್ತಿ ಮೀಸಲಾತಿ ರಕ್ಷಣೆಗಾಗಿ ರಾಜ್ಯ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿರುವ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಬೇಕು. ಸಂವಿಧಾನದ 117ನೇ ತಿದ್ದುಪಡಿಗೆ ಅನುಮೋದನೆ ನೀಡಬೇಕು. ಅಸ್ಪೃಶ್ಯತಾ ನಿವಾರಣೆ ಕಾಯ್ದೆ 1989 ದುರ್ಬಲಗೊಳಿಸುವ ಪ್ರಯತ್ನ ಕೈಬಿಡಬೇಕು. ಜೇಷ್ಠತಾ ಪಟ್ಟಿ ತಯಾರಿಸುವ ನೆಪದಲ್ಲಿ ಅನ್ಯಾಯವೆಸಗಿರುವ ಅಧಿಕಾರಿಗಳ, ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry