ಖಾಸಗಿ ಕೃಷಿ ಕಾಲೇಜುಗಳ ವಿರುದ್ಧ ಕ್ರಮಕ್ಕೆ ಆಗ್ರಹ

7
19ರಂದು ಕೃಷಿ ವಿದ್ಯಾರ್ಥಿಗಳ ಪ್ರತಿಭಟನೆ

ಖಾಸಗಿ ಕೃಷಿ ಕಾಲೇಜುಗಳ ವಿರುದ್ಧ ಕ್ರಮಕ್ಕೆ ಆಗ್ರಹ

Published:
Updated:

ಬೆಂಗಳೂರು: ‘ಖಾಸಗಿ ಕೃಷಿ ವಿಶ್ವವಿದ್ಯಾಲಯಗಳ ಅನುಮತಿ ರದ್ದುಪಡಿಸುವಂತೆ ಒತ್ತಾಯಿಸಿ ಕೃಷಿ ಪದವಿ ವಿದ್ಯಾರ್ಥಿಗಳ ಸಂಘ ಜೂನ್‌ 19ರಂದು ಬೆಳಿಗ್ಗೆ 10ಕ್ಕೆ ಟೌನ್‌ಹಾಲ್‌ನಿಂದ ಸ್ವಾತಂತ್ರ್ಯ ಉದ್ಯಾನವನದವರೆಗೆ ಪ್ರತಿಭಟನೆ ಹಮ್ಮಿಕೊಂಡಿದೆ.

‘ಖಾಸಗಿ ಕಾಲೇಜುಗಳಲ್ಲಿ ನುರಿತ ಶಿಕ್ಷಕರಿಲ್ಲ, ಪ್ರಯೋಗಾಲಯಗಳಿಲ್ಲ, ಪ್ರ‌ವೇಶ ಸಂಖ್ಯೆಗೆ, ಶುಲ್ಕಗಳಿಗೆ ಮಿತಿ ಇಲ್ಲ. ಕೇವಲ ಹಣ ಮಾಡುವ ಉದ್ದೇಶವನ್ನು ಈ ಕಾಲೇಜುಗಳು ಹೊಂದಿದ್ದು ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಿವೆ’ ಎಂದು ಬಿ.ಟಿ.ಲಲಿತಾ ನಾಯಕ್‌ ಪತ್ರಿಕಾಗೋಷ್ಠಿಯಲ್ಲಿ ದೂರಿದರು.

‘ಸರ್ಕಾರ ಖಾಸಗಿ ಕಾಲೇಜುಗಳಿಗೆ ಅನುಮತಿ ನೀಡುವ ಬದಲಿಗೆ ರಾಜ್ಯದ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಮತ್ತು ಸಂಶೋಧನಾ ಕೇಂದ್ರಗಳಲ್ಲಿ ಭೂಮಿ, ಮೂಲ ಸೌಕರ್ಯ ‌ಉಪಯೋಗಿಸಿಕೊಂಡು ಜಿಲ್ಲೆಗೊಂದು ಕೃಷಿ ಕಾಲೇಜು ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದ ಆರು ಕೃಷಿ ವಿವಿಗಳು 2000 ವಿದ್ಯಾರ್ಥಿಗಳಿಗೆ ಪ್ರವೇಶ ನೀಡುತ್ತಿದ್ದರೆ, ಖಾಸಗಿ ಕಾಲೇಜುಗಳು ನಿಯಮಗಳನ್ನು ಪಾಲಿಸದೆ ವಿದ್ಯಾರ್ಥಿಗಳ ಜೀವನದ ಜೊತೆ ಚೆಲ್ಲಾಟವಾಡುತ್ತಿವೆ. ಸರ್ಕಾರ ಕೂಡಲೇ ಈ ಕಾಲೇಜುಗಳ ವಿರುದ್ಧ ಕ್ರಮ ಕೈಗೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry