ವಾಲ್ಮೀಕಿ ಸಮುದಾಯಕ್ಕೆ ಪ್ರಾತಿನಿಧ್ಯ: ಮಠಾಧೀಶರ ಆಗ್ರಹ

7

ವಾಲ್ಮೀಕಿ ಸಮುದಾಯಕ್ಕೆ ಪ್ರಾತಿನಿಧ್ಯ: ಮಠಾಧೀಶರ ಆಗ್ರಹ

Published:
Updated:

ಬೆಂಗಳೂರು: ಮೈತ್ರಿ ಸರ್ಕಾರದ ಸಂಪುಟದಲ್ಲಿ ವಾಲ್ಮೀಕಿ ಸಮುದಾಯಕ್ಕೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು ಎಂದು ವಾಲ್ಮೀಕಿ ಸಮುದಾಯದ ಸ್ವಾಮೀಜಿಗಳು ಒತ್ತಾಯಿಸಿದ್ದಾರೆ.

ಈ ಸಂಬಂಧ ಮುಂದಿನ ಹೋರಾಟದ ರೂಪುರೇಷೆಯನ್ನು ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಸ್ವಾಮೀಜಿಗಳ ಸಮ್ಮುಖದಲ್ಲಿ ಬಹಿರಂಗಪಡಿಸಲಾಗುವುದು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾದ ಅಧ್ಯಕ್ಷ ಎಂ.ನರಸಿಂಹಯ್ಯ ತಿಳಿಸಿದ್ದಾರೆ.

ವಾಲ್ಮೀಕಿ ಸಮಾಜದ ವಿವಿಧ ಸ್ವಾಮೀಜಿಗಳು ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ, ಉಪ

ಮುಖ್ಯಮಂತ್ರಿ ಜಿ. ಪರಮೇಶ್ವರ, ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರನ್ನು ಭೇಟಿ ಮಾಡಲು ನಿರ್ಧರಿಸಿದ್ದಾರೆ. ಸತೀಶ್‌ ಜಾರಕಿಹೊಳಿ, ವಿ.ಎಸ್‌.ಉಗ್ರಪ್ಪ ಸೇರಿದಂತೆ ಹಲವು ಹಿರಿಯ ಶಾಸಕರು ಸಚಿವ ಸ್ಥಾನಕ್ಕೆ ಅರ್ಹರಿದ್ದಾರೆ. ಇವರನ್ನು ಕೈಬಿಟ್ಟಿರುವುದು ಸರಿಯಲ್ಲ ಎಂದು ಅವರು ಹೇಳಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry