ಮರಣಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ

7

ಮರಣಪತ್ರ ಬರೆದಿಟ್ಟು ಯುವಕ ಆತ್ಮಹತ್ಯೆ

Published:
Updated:

ಬೆಂಗಳೂರು: ಕೆ.ಜಿ.ಹಳ್ಳಿ ಬಳಿ ಆಸೀಫ್‍ವುಲ್ಲಾ (19) ಎಂಬುವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಫ್ಯಾಬ್ರಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಅವರು, ಪೋಷಕರ ಜತೆ ವಾಸವಿದ್ದರು. ರಮ್ಜಾನ್ ಹಬ್ಬವಿದ್ದಿದ್ದರಿಂದ ಪೋಷಕರು, ಶನಿವಾರ ಸಂಬಂಧಿಕರ ಮನೆಗೆ ಹೋಗಿದ್ದರು. ಆಸೀಫ್‌ ಒಬ್ಬರೇ ಮನೆಯಲ್ಲಿದ್ದರು. ಪೋಷಕರು ತಡರಾತ್ರಿ ವಾಪಸ್‌ ಮನೆಗೆ ಬಂದಾಗ ವಿಷಯ ಗೊತ್ತಾಗಿದೆ.

ಅತಿಯಾಗಿ ತಂಬಾಕು ಸೇವನೆ ಮಾಡುತ್ತಿದ್ದ ಆಸೀಫ್‌ಗೆ ಪೋಷಕರು ಬುದ್ಧಿವಾದ ಹೇಳಿದ್ದರು. ಸ್ಥಳದಲ್ಲಿ ಮರಣಪತ್ರ ಸಿಕ್ಕಿದ್ದು, ಪರಿಶೀಲಿಸ ಲಾಗುತ್ತಿದೆ ಎಂದು ಕೆ.ಜಿ.ಹಳ್ಳಿ ಠಾಣೆಯ ಪೊಲೀಸರು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry