ಸಮಾನ ಶಿಕ್ಷಣ ನೀತಿ ಜಾರಿಗೆ ಬರಗೂರು ಒತ್ತಾಯ

7
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಿಗೆ ಪತ್ರ

ಸಮಾನ ಶಿಕ್ಷಣ ನೀತಿ ಜಾರಿಗೆ ಬರಗೂರು ಒತ್ತಾಯ

Published:
Updated:
ಸಮಾನ ಶಿಕ್ಷಣ ನೀತಿ ಜಾರಿಗೆ ಬರಗೂರು ಒತ್ತಾಯ

ಬೆಂಗಳೂರು: ಸಮಗ್ರ ಹಾಗೂ ಸಮಾನ ಶಾಲಾ ಶಿಕ್ಷಣ ನೀತಿಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್‌.ಮಹೇಶ್‌ ಅವರಿಗೆ ಪತ್ರ ಬರೆದಿದ್ದಾರೆ.

‘ಶಿಕ್ಷಣ ಪದ್ಧತಿಯಲ್ಲಿ ಅಸಮಾನತೆಯ ಅಡಿಪಾಯ ಹಾಕಲಾಗಿದೆ. ಇದರಿಂದಾಗಿ ಖಾಸಗಿ ಶಾಲೆಗಳ ಎಲ್‌ಕೆಜಿ, ಯುಕೆಜಿಗಿಂತ ಕಡಿಮೆ ಇಲ್ಲದಂತೆ ಪೂರ್ವ ಪ್ರಾಥಮಿಕ ಶಾಲೆಗಳನ್ನು ಸರ್ಕಾರ ನಡೆಸಬೇಕು. ಗ್ರಾಮ ಪಂಚಾಯಿತಿಗೆ ಒಂದರಂತೆ ಸುಸಜ್ಜಿತವಾದ ಸಾರ್ವಜನಿಕ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ ಇರಬೇಕು. ಇಲ್ಲಿ ಕಟ್ಟಡ, ಶೌಚಾಲಯ, ಗ್ರಂಥಾಲಯ, ಪ್ರಯೋಗಾಲಯಗಳು ಗುಣಮಟ್ಟದ್ದಾಗಿರಬೇಕು’ ಎಂದು ಅವರು ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

‘ಸರ್ಕಾರಿ ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳಲ್ಲಿ ಕಡ್ಡಾಯವಾಗಿ, ರಾಜ್ಯ ಸರ್ಕಾರ ನಿಗದಿಪಡಿಸಿದ ಪಠ್ಯಕ್ರಮವನ್ನೇ ಅನುಸರಿಸಬೇಕು. ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ ಇರುವ ಅಂತರವನ್ನು ಕಾಯ್ದುಕೊಳ್ಳಬೇಕು. ಈ ನಿಯಮವನ್ನು ಉಲ್ಲಂಘಿಸಿ ಖಾಸಗಿ ಶಾಲೆಗಳಿಗೆ ಅನುಮತಿ ನೀಡಬಾರದು’ ಎಂದು ಅವರು ಒತ್ತಾಯಿಸಿದ್ದಾರೆ.

‘ನಲಿಕಲಿ ಪದ್ಧತಿಯನ್ನು ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಮಾತ್ರ ಅಳವಡಿಸಲಾಗಿದೆ. ಬೇರೆ ಮಾಧ್ಯಮ ಹಾಗೂ ಅನುದಾನಿತ, ಅನುದಾನ ರಹಿತ ಖಾಸಗಿ ಶಾಲೆಗಳಿಗೆ ಅಳವಡಿಸಿಲ್ಲ. ಇದು ಶೈಕ್ಷಣಿಕ ಅಸಮಾನತೆಯ ಕ್ರಮ. ಕೂಡಲೇ ಈ ಪದ್ಧತಿಯನ್ನು ರದ್ದು ಮಾಡಬೇಕು. ಇಲ್ಲವೇ ಎಲ್ಲಾ ಶಾಲೆಗಳಲ್ಲಿಯೂ ಅಳವಡಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry